ರಾಜ್ಯದಲ್ಲಿ ಒಂದು ವಾರಗಳ ಕಾಲ ಮಳೆ, ಅಲ್ಲಲ್ಲಿ ಮೋಡದ ವಾತಾವರಣ

ಬೆಂಗಳೂರು ನಗರ: ಅಸಾನಿ ಆರ್ಭಟ ಇಳಿಮುಖವಾದ ಬಳಿಕವೂ ಅರಬ್ಬಿ ಸಮುದ್ರದಲ್ಲಿ ಮುಂಗಾರು ವಾತಾವರಣ ಯಥಾಸ್ಥಿತಿ ಮುಂದುವರಿದಿದ್ದು, ಇದರ ಪ್ರಭಾವ ರಾಜ್ಯದ ಕರಾವಳಿ ಜಿಲ್ಲೆಗಳ ಮೇಲೆ ಕಾಣಿಸಿಕೊಳ್ಳುತ್ತಿದೆ. ದಕ್ಷಿಣ ಕನ್ನಡ, ಕಾಸರಗೋಡು ಹಾಗೂ ಉಡುಪಿಯಲ್ಲಿ ಮುಂದಿನ ಒಂದು ವಾರದ ತನಕ ಮೋಡ, ಮಳೆಯ ಜುಗಲ್ ಬಂದಿ ಮುಂದುವರಿಯುವ ಎಲ್ಲಾ ಲಕ್ಷಣ ಗೋಚರಿಸುತ್ತಿದೆ.

ಕೇರಳದಲ್ಲಿ ವರುಣಾರ್ಭಟ
ಕೇರಳ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮುಂದಿನ ಒಂದೆರಡು ದಿನಗಳ ಕಾಲ ಭಾರೀ ಮಳೆ‌ಸುರಿಯುವ ಸಾಧ್ಯತೆ ದಟ್ಟವಾಗಿದೆ. ಈ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸಲು ಆಡಳಿತಗಳು ಈಗಾಗಲೇ ನಾಗರಿಕರು, ಮೀನುಗಾರರಿಗೆ ಸೂಚಿಸಿವೆ.

ರಾಜ್ಯದಲ್ಲಿ ಹೇಗಿದೆ?
ಮೇ 15ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯಂತೆ ನೆರೆಯ ಕಾಸರಗೋಡಿನ ಹೆಚ್ಚಿನ ಭಾಗಗಳಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸುತ್ತಮುತ್ತ ಭರ್ಜರಿ ಮಳೆಯ ಮುನ್ಸೂಚನೆ ಇದೆ. ಈ ಜಿಲ್ಲೆಗಳ ಉಳಿದೆಡೆ, ಉಡುಪಿಯ ಹೆಚ್ಚಿನ ಭಾಗಗಳಲ್ಲಿ, ಉತ್ತರ ಕನ್ನಡದ ಅಲ್ಲಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಕಂಡುಬಂದಿದೆ.

ಇನ್ನು ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಕೂಡಾ ಅಲ್ಲಲ್ಲಿ ಕೂಡಾ ಸಾಮಾನ್ಯ ಮಳೆಯ ಸಾಧ್ಯತೆಗಳಿದ್ದರೆ, ಕರ್ನಾಟಕದ ಉಳಿದ ಭಾಗಗಳಲ್ಲಿ ಮೋಡ ಅಥವಾ ತುಂತುರು ಮಳೆಯ ನಿರೀಕ್ಷೆಯಿದೆ.

Sneha Gowda

Recent Posts

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ‌ ಏ.28 ರಂದು “ಆಟಿಸಂ ಜಾಗೃತಿ”ಕುರಿತು ಎಕ್ಷಪ್ಸನಲ್ ಕಾರ್ಯಕ್ರಮ

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ ಪಾಥ್ವೆ ಎಂಟರ್‌ ಪ್ರೈಸಸ್‌ ಹಾಗೂ ಸ್ಪೇಷಲ್‌ ಪೇರೆಂಟ್ಸ್‌ ಸಪೋರ್ಟ್‌ ಗ್ರೂಪ್‌ ಅವರ ಸಹಯೋಗದೊಂದಿಗೆ Aibha association…

18 mins ago

ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ : ಎಸ್‌ಐಟಿ ತನಿಖೆ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ…

45 mins ago

ಒಂದೇ ದಿನ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಧಾನಿ ಮೋದಿ, ಪ್ರಿಯಾಂಕ ಅಬ್ಬರ

ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ…

1 hour ago

ಮೆಂಟಲ್ ಸೂರಿ ಹತ್ಯೆ ಕೇಸ್‌ : ಮೃತನ ಮಗನೂ ಸೇರಿ ಮೂವರ ಬಂಧನ

ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಕಿಂಗ್‌ ಎನಿಸಿಕೊಂಡಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಶಿವಮೊಗ್ಗ ಬಾಪೂಜಿನಗರದ 7ನೇ ಕ್ರಾಸ್ ನಲ್ಲಿರುವ…

2 hours ago

ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ರವಾನೆ : ಮುಸ್ಲಿಂ ಯುವಕನಿಗೆ ಬಿತ್ತು ಧರ್ಮದೇಟು

17 ವರ್ಷದ ಅಪ್ರಾಪ್ತೆಗೆ ಮುಸ್ಲಿಂ ಯುವಕನೋರ್ವ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದನ್ನು ರೆಡ್‌ ಹ್ಯಾಂಡ್‌ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ…

2 hours ago

ಅಕ್ರಮ ಜಾನುವಾರು ಸಾಗಾಟ: 9 ಆರೋಪಿಗಳು ಪೊಲೀಸರ ವಶಕ್ಕೆ

ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ…

2 hours ago