News Karnataka Kannada
Sunday, May 19 2024
ಬೆಂಗಳೂರು ನಗರ

ರಾಜ್ಯದಲ್ಲಿ ಒಂದೇ ದಿನ 10 ಒಮಿಕ್ರಾನ್‌ ಪ್ರಕರಣಗಳು ಪತ್ತೆ

152 new COVID-19 cases detected in Delhi
Photo Credit :

ರಾಜ್ಯದಲ್ಲಿ ಪ್ರತಿದಿನ ಸಾವಿರಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿರುವ ನಡುವೆ ಒಮಿಕ್ರಾನ್ ಕಂಟಕ ಕೂಡ ಹೆಚ್ಚಾಗಿದೆ. ನಿನ್ನೆ ಒಂದೇ ದಿನ ರಾಜ್ಯದಲ್ಲಿ 10 ಮಂದಿಗೆ ಒಮಿಕ್ರಾನ್ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 76ಕ್ಕೆ ಏರಿಕೆಯಾಗಿದೆ.

8 ಒಮಿಕ್ರಾನ್ ಪ್ರಕರಣಗಳು ಬೆಂಗಳೂರಿನಲ್ಲಿ ಪತ್ತೆಯಾಗಿದ್ದು. ಎರಡು ಪ್ರಕರಣಗಳು ಧಾರವಾಡದಲ್ಲಿ ಪತ್ತೆಯಾಗಿದೆ. ಬೆಂಗಳೂರಿನಲ್ಲಿ ಪತ್ತೆಯಾದ 8 ಮಂದಿಯ ಪೈಕಿ 5 ಮಂದಿ ಅಂತಾರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ ಎಂದು ವರದಿ ತಿಳಿಸಿದೆ.

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿದ್ದು, ರಾಜ್ಯದಲ್ಲಿನ ಒಮಿಕ್ರಾನ್ ಸೋಂಕಿನ ಪ್ರಕರಣಗಳ ಸಂಖ್ಯೆ 76ಕ್ಕೇ ಏರಿಕೆಯಾಗಿದೆ ಎಂದಿದ್ದಾರೆ.

ನಿನ್ನೆ ರಾಜ್ಯದಲ್ಲಿ ಒಮಿಕ್ರಾನ್ ಜತೆಗೆ ಕೋವಿಡ್ ಸೋಂಕಿನ ಸಂಖ್ಯೆ ಕೂಡ ಹೆಚ್ಚಾಗಿದ್ದು, ಒಂದೇ ದಿನ 1,187 ಸೋಂಕಿತರು ಪತ್ತೆಯಾಗಿದ್ದಾರೆ. ಬೆಂಗಳೂರು ಒಂದರಲ್ಲೇ 923 ಸೋಂಕಿತರು ಪತ್ತೆಯಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು