ಬೆಂಗಳೂರು : ದೇಶದಲ್ಲಿಯೇ ಮೊದಲ ಪ್ರಕರಣಗಳು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದು, ರಾಜ್ಯದ ಜನರ ಆತಂಕಕ್ಕೆ ಕಾರಣವಾಗಿವೆ. ಇನ್ನು ಈ ವೇಳೆಯಲ್ಲಿ ದಕ್ಷಿಣ ಆಫ್ರಿಕಾದಿಂದ ಬಂದಿದ್ದ 66 ವರ್ಷದ ವೃದ್ದ ಮತ್ತು ಬೆಂಗಳೂರಿನ ವೈದ್ಯರಾದ 46 ವರ್ಷದ ವ್ಯಕ್ತಿಯಲ್ಲಿ ಒಮಿಕ್ರಾನ್ ವೈರಸ್ ಪತ್ತೆಯಾಗಿದೆ.
ಈ ಹಿನ್ನೆಲೆಯಲ್ಲಿ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವ್ರು ಮಹತ್ವ ಸಭೆ ನಡೆಸಲಿದ್ದಾರೆ. ರಾಜ್ಯದಲ್ಲಿ ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸದಲ್ಲಿದ್ದ ಸಿಎಂ ಬೊಮ್ಮಾಯಿ ಇಂದೇ ರಾಜ್ಯಕ್ಕೆ ಹಿಂದಿರುಗಲಿದ್ದಾರೆ. ಇನ್ನು ನಾಳೆ ಈ ಕುರಿತು ಮಹತ್ವದ ಮೀಟಿಂಗ್ ನಡೆಸಲಿದ್ದಾರೆ.
ಒಮಿಕ್ರಾನ್ ಕೇಸ್ ಪತ್ತೆಯಾಗುತ್ತಿದ್ದಂತೆ ಪ್ರತಿಕ್ರಿಯಿಸಿದ ಸಿಎಂ, ಒಮಿಕ್ರಾನ್ ತಡೆ ಬಗ್ಗೆ ತಜ್ಞರ ಜತೆ ಚರ್ಚಿಸಿದ್ದೇನೆ. ತಜ್ಞರು ಆತಂಕ ಪಡುವಂತಿಲ್ಲ ಎಂದಿದ್ದಾರೆ. ಇನ್ನು ಆಗತ್ಯಬಿದ್ರೆ ಮಾರ್ಗಸೂಚಿ ಬದಲಾಯಿಸುತ್ತೇವೆ ಎಂದಿದ್ದಾರೆ.