News Karnataka Kannada
Wednesday, May 08 2024
ಬೆಂಗಳೂರು ನಗರ

ರಾಜ್ಯದಲ್ಲಿ ಕೊರೋನಾ ಏರಿಕೆ, ಒಂದೇ ದಿನ 707 ಜನರಲ್ಲಿ ಸೋಂಕು ಪತ್ತೆ

Covid 19
Photo Credit :

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ದಿಢೀರ್ ಏರಿಕೆ ಕಂಡಿದೆ. ಜಿಲ್ಲೆಗಳಲ್ಲಿ ಕೂಡ ಕೊರೋನಾ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳೂ ಕೂಡ ಹೆಚ್ಚಾಗಿವೆ.ಇಂದು ಒಂದೇ ದಿನ 707 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಒಂದು ದಿನ 565 ಜನರಿಗೆ ಸೋಂಕು ತಗುಲಿದ್ದು, ಮೂವರು ಮೃತಪಟ್ಟಿದ್ದಾರೆ. 104 ಜನ ಬಿಡುಗಡೆಯಾಗಿದ್ದು, 6846 ಸಕ್ರಿಯ ಪ್ರಕರಣಗಳಿವೆ.

252 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.ಮೂವರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 8223 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 0.61 ರಷ್ಟು ಇದೆ.

ಒಟ್ಟು ಪ್ರಕರಣಗಳ ಸಂಖ್ಯೆ 30,06,505 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 38,327 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 29,59,926 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ರಾಮನಗರ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ.

ಬೆಂಗಳೂರು ನಗರ 565, ದಕ್ಷಿಣಕನ್ನಡ 11, ಹಾಸನ 17, ಕೊಡಗು 12, ಮೈಸೂರು 16, ಉಡುಪಿ 19 ಹೊಸ ಪ್ರಕರಣ ವರದಿಯಾಗಿವೆ. ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಸಾವಿನ ವರದಿಯಾಗಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು