ರಾಜ್ಯದಲ್ಲಿ ಕೊರೋನಾ ಹೆಚ್ಚಾದರೆ ಶಾಲೆ ಬಂದ್ – ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ವೈರಸ್ ಕಾಲಿಟ್ಟ ನಂತರ, ಪೋಷಕರು ಮಕ್ಕಳನ್ನು ಶಾಲೆಗೆ ಕಳಿಸೋದಕ್ಕೆ ಹಿಂದೆ ಮುಂದೆ ನೋಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಕೊರೋನಾ ಹೆಚ್ಚಾದ್ರೆ ಶಾಲೆ ಬಂದ್ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ. ಕೋವಿಡ್ ತೀವ್ರತೆಯನ್ನು ಆಧರಿಸಿ, ಶಾಲಾ-ಕಾಲೇಜು ಮುಚ್ಚೋ  ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.

 

ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿನ ಕೊರೋನಾ ಸೋಂಕಿನ  ತೀವ್ರತೆ ಬಗ್ಗೆ ತಜ್ಞರಿಂದ ಪ್ರತಿ ದಿನ ವರದಿಯನ್ನು ಪಡೆಯುತ್ತಿದ್ದೇವೆ.

 

ಸದ್ಯಕ್ಕೆ ತಜ್ಞರು ನೀಡುತ್ತಿರುವಂತ ವರದಿಯ ಪ್ರಕಾರ ಯಾರೂ ಆತಂಕ ಪಡುವಂತೆ ಕೊರೋನಾ ತೀವ್ರತೆ ಇಲ್ಲ. ಕೊರೋನಾ ತೀವ್ರತೆ ಆಧರಿಸಿ, ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ವಸತಿ ಶಾಲೆಗಳಲ್ಲಿ ಕೊರೋನಾ ಹೆಚ್ಚಾದ ಬಗ್ಗೆ ಗಮನಕ್ಕೆ ಬಂದಿದೆ. ಆ ಬಗ್ಗೆ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ತಾಂತ್ರಿಕ ಸಲಹಾ ಸಮಿತಿ ಸದಸ್ಯರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ರಾಜ್ಯದಲ್ಲಿ ಸದ್ಯಕ್ಕೆ ಕೊರೋನಾ ತೀವ್ರತೆ ಇಲ್ಲ. ಪೋಷಕರು ಆತಂಕ ಪಡಬಾರದು ಎಂದರು

Swathi MG

Recent Posts

ಈಶಾನ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿಗಳ ಬಂಡಾಯ ಶಮನ: ವಿಜಯೇಂದ್ರ ಮಾತಕತೆ ಸಕ್ಸಸ್

ಈಶಾನ್ಯ ಪದವೀಧರ ಕ್ಷೇತ್ರ, ನೈಋತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ…

5 mins ago

ಥಾಯ್ಲೆಂಡ್ ಓಪನ್ 2024: ಸಾತ್ವಿಕ್-ಚಿರಾಗ್ ಜೋಡಿಗೆ ಭರ್ಜರಿ ಗೆಲುವು

ಇಂದು (ಭಾನುವಾರ) ನಡೆದ ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌ ಫೈನಲ್​ ಪಂದ್ಯದಲ್ಲಿ ಗೆದ್ದು ಚಾಂಪಿಯನ್​ ಪಟ್ಟ ಅಲಂಕರಿಸಿದ್ದಾರೆ.

17 mins ago

ಕೇರಳದ ಕೆಲವು ರಾಜ್ಯಗಳಿಗೆ ಮೇ 20 ರವರೆಗೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಕೇರಳದ ಪತ್ತನಂತಿಟ್ಟ, ಇಡುಕ್ಕಿ, ಅಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಮೇ 20 ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್…

55 mins ago

ಕೇಜ್ರಿವಾಲ್ ನಿವಾಸದ ಸಿಸಿಟಿವಿ ಡಿವಿಆರ್ ಪೊಲೀಸ್‌ ವಶಕ್ಕೆ

ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡವು ಭಾನುವಾರ…

58 mins ago

5 ದಿನ ಮೀನುಗಾರಿಕೆಗೆ ತೆರಳದಂತೆ ಉತ್ತರ ಕನ್ನಡ ಜಿಲ್ಲಾಡಳಿತ ಸೂಚನೆ

ಮೇ 18 ರಿಂದ ಮೇ 22 ರ ವರೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ…

1 hour ago

ರಾಹುಲ್, ಅಖಿಲೇಶ್ ಯಾದವ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಕಾಲ್ತುಳಿತ

 ಪಕ್ಷದ ಕಾರ್ಯಕರ್ತರ ಗದ್ದಲ, ಕಾಲ್ತುಳಿತದಂತಹ ಪರಿಸ್ಥಿತಿಯಿಂದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್…

1 hour ago