ರಾಜ್ಯದಲ್ಲಿ ಕೋವಿಡ್ ನಿಯಂತ್ರಿಸಲು ಎರಡನೇ ವಾರದ ವೀಕೆಂಡ್ ಕರ್ಫ್ಯೂ ಜಾರಿ

ರಾಜ್ಯದಲ್ಲಿ ಕೋವಿಡ್ ನಿಯಂತ್ರಿಸಲು ಎರಡನೇ ವಾರದ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ನಿನ್ನೆ ರಾತ್ರಿಯಿಂದಲೇ ಎಲ್ಲೆಡೆ ಪೊಲೀಸರು ರಸ್ತೆಗಿಳಿದು ಜನರಿಗೆ ಎಚ್ಚರಿಕೆ ನೀಡಿದರು.

ಇನ್ನು ವೀಕೆಂಡ್ ಕರ್ಫ್ಯೂ, ಸಂಕ್ರಾಂತಿ ಹಬ್ಬ ಇರುವ ಕಾರಣ ಬೆಳಗ್ಗೆಯೇ ತಮ್ಮ ಊರುಗಳನ್ನು ತಲುಪಲು ರೈಲ್ವೆ ನಿಲ್ದಾಣ ಹಾಗೂ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಜನಜಂಗುಳಿ ಸೇರಿತ್ತು. ಮಹಾಮಾರಿ ನಡುವೆ ಇಂದು ರಾಜ್ಯಾದ್ಯಂತ ಸಂಕ್ರಾಂತಿ ಹಬ್ಬದ ಸಡಕರ ಮನೆ ಮಾಡಿದೆ.

ಬಹುತೇಕ ಕಡೆಗಳಲ್ಲಿ ಶುಕ್ರವಾರವೇ ಸಂಕ್ರಾಂತಿ ಆಚರಿಸಿದರೆ ಮತ್ತೆ ಕೆಲವರು ಇಂದು ಆಚರಿಸುತ್ತಿದ್ದಾರೆ. ಶುಕ್ರವಾರ ರಾತ್ರಿ 9:30ರಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಎಲ್ಲಾ ಅನಗತ್ಯ ಸೇವೆಗಳು, ವಾಣಿಜ್ಯ ಚಟುವಟಿಕೆಗಳನ್ನು ಬಂದ್ ಮಾಡಿಸಲಾಗಿದೆ.

ವೀಕೆಂಡ್ ಕರ್ಫ್ಯೂ ನಡುವೆ ಹಬ್ಬದ ನೆಪದಲ್ಲಿ ಅನಗತ್ಯವಾಗಿ ರಸ್ತೆಗಿಳಿದರೆ ವಾಹನಗಳನ್ನು ಪೊಲೀಸರು ಸೀಜ್ ಮಾಡಲಿದ್ದಾರೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

Sneha Gowda

Recent Posts

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…

5 mins ago

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…

17 mins ago

ಡಾ. ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…

29 mins ago

ಲಕ್ನೋ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ 10 ವಿಕೆಟ್​ಗಳ ಭರ್ಜರಿ ಜಯ

ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು ಆತಿಥೇಯ ಸನ್‌ರೈಸರ್ಸ್ ಹೈದರಾಬಾದ್‌ ತಂಡ…

1 hour ago

ಇಂದು ಕೊಡಗು,ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ರಾಜ್ಯದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 9ರಂದು ಬಿರುಗಾಳಿಯೊಂದಿಗೆ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ…

1 hour ago

ಇಂದಿನ ರಾಶಿ ಫಲ : ಯಾರಿಗೆ ಶುಭ , ಯಾರಿಗೆ ಅಶುಭ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 09 ಮೇ​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ…

2 hours ago