News Karnataka Kannada
Tuesday, April 30 2024
ಬೆಂಗಳೂರು ನಗರ

ರಾಜ್ಯದಲ್ಲಿ ಜಾತಿ ಸೂಚಕ ಹೆಸರಿರುವಂತ ಗ್ರಾಮಗಳ ಹೆಸರು ರದ್ದು; ಸಚಿವ ಆರ್ ಅಶೋಕ್

Mandya: Soon India will become Congress free country says R Ashok
Photo Credit :

ಬೆಂಗಳೂರು : ರಾಜ್ಯದಲ್ಲಿ ಅನೇಕ ಗ್ರಾಮಗಳಿಗೆ ಜಾತಿ ಸೂಚಕ ಹೆಸರುಗಳಿವೆ. ವಡ್ಡರಹಟ್ಟಿ, ಗೊಲ್ಲರಹಟ್ಟಿ, ಬೋವಿಹಟ್ಟಿ ಹೀಗೆ ಮೊದಲಾದಂತ ಜಾತಿ ಸೂಚಕ ಹೆಸರಿರುವಂತ ಗ್ರಾಮಗಳ ಹೆಸರನ್ನು ರದ್ದು ಪಡಿಸಲಾಗುತ್ತದೆ ಎಂಬುದಾಗಿ ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.

ಇಂದು ವಿಧಾನಸಭೆಯಲ್ಲಿ ಶಾಸಕ ಬಸವನಗೌಡ ತುರವಿಹಾಳ್ ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಅವರು, ರಾಜ್ಯದ ಅನೇಕ ಕಡೆಯಲ್ಲಿ ವಡ್ಡರಹಟ್ಟಿ, ಗೊಲ್ಲರಹಟ್ಟಿ, ಕುರುಬರ ಹಟ್ಟಿ ಸೇರಿದಂತೆ ನಾನಾ ರೀತಿಯ ಜಾತಿ ಸೂಚಕ ಹೆಸರುಗಳಿವೆ. ಈ ಜಾತಿ ಸೂಚಕ ಹೆಸರಿರುವಂತ ಗ್ರಾಮಗಳ ಹೆಸರನ್ನು ತಕ್ಷಣವೇ ತೆಗೆದು ಹಾಕಲು ಸೂಚಿಸೋದಾಗಿ ತಿಳಿಸಿದರು.

ಈ ವೇಳೆ ಮಧ್ಯಪ್ರವೇಶಿಸಿ ಮಾತನಾಡಿದಂತ ಕಾಂಗ್ರೆಸ್ ಸದಸ್ಯ ರಮೇಶ್ ಕುಮಾರ್, ಕೆಲವು ಕಡೆಗಳಲ್ಲಿ ವಡ್ಡರಪಾಳ್ಯ, ಮಾದಿಗರಹಳ್ಳಿ ಎಂಬಂತ ಜಾತಿ ಸೂಚಕ ಹೆಸರುಗಳನ್ನು ಇಟ್ಟುಕೊಂಡಿದ್ದಾರೆ. ದಯವಿಟ್ಟು ನಿಮ್ಮ ಅಧಿಕಾರಿಗಳಿಗೆ ಈ ಹೆಸರುಗಳನ್ನು ತೆಗೆಯುವಂತೆ ಸೂಚಿಸಲು ಮನವಿ ಮಾಡಿದರು.

ಇದಕ್ಕೆ ಉತ್ತರಿಸಿದಂತ ಆರ್ ಅಶೋಕ್, ಲಂಬಾಣಿ ತಾಂಡಾ, ಗೊಲ್ಲರಹಟ್ಟಿ, ವಡ್ಡರಹಟ್ಟಿ, ಕುರುಬರಹಟ್ಟಿ, ನಾಯಕರ ಹಟ್ಟಿ, ಮಜರೇ ಗ್ರಾಮ, ಹಾಡಿ, ದೊಡ್ಡಿ, ಪಾಳ್ಯ, ಕ್ಯಾಂಪ್, ಕಾಲೋನಿ ಸೇರಿದಂತೆ ಇತರೆ ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಬೇಕು. ಇದು ಬೇಗ ಮುಗಿಯುವ ಪ್ರಕ್ರಿಯೆಯಲ್ಲ. 8, 9 ತಿಂಗಳು ಆಗಲಿದೆ. ಆದ್ರೇ ಜಾತಿ ಸೂಚಕ ಹೆಸರಿರುವಂತ ಗ್ರಾಮಗಳ ಹೆಸರನ್ನು ರದ್ದುಪಡಿಸಲು ತಕ್ಷಣವೇ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡುವುದಾಗಿ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು