ಬೆಂಗಳೂರು : ರಾಜ್ಯದಲ್ಲಿ ಒಂದೆಡೆ ಕೊರೋನ ನಿಯಂತ್ರಿಸಲು ಲಾಕ್ ಡಾನ್ ಘೋಷಿಸಲಾಗಿದೆ. ಅಂತೆಯೇ ಇನ್ನೊಂದೆಡೆ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಹೆಚ್ಚುತ್ತಿದ್ದು, 1250 ಪ್ರಕರಣಗಳಿಗೆ ತಲುಪಿದೆ.
ಇದುವರೆಗೂ ಈ ಸೋಂಕಿನಿಂದ ಸುಮಾರು 30 ರಿಂದ 35 ಮಂದಿ ಮೃತಪಟ್ಟಿರುವ ಸಾಧ್ಯತೆಯಿದ್ದು , ಡೆತ್ ಆಡಿಟ್ ನಿಖರ ಮಾಹಿತಿಗೆ ಸೂಚನೆ ನೀಡಿದ್ದೇನೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ .
ಬ್ಲ್ಯಾಕ್ ಫಂಗಸ್ ಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ . ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯ ದರ ಇನ್ನೂ ನಿಗದಿಯಾಗಿಲ್ಲ. ಬ್ಲ್ಯಾಕ್ ಫಂಗಸ್ ಗೆ ಔಷಧ ಕೊಡಿಸಲು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಪ್ರಯತ್ನ ನಡೆಸಿದ್ದಾರೆ . 8 ಕ್ಕೂ ಹೆಚ್ಚು ಕಂಪನಿಗಳ ಜತೆ ಚರ್ಚೆ ನಡೆಸಿದ್ದಾರೆ ಎಂದು ಸುಧಾಕರ್ ಹೇಳಿದ್ದಾರೆ.