ಬೆಂಗಳೂರು: ರಾಜ್ಯದಲ್ಲಿ ಇನ್ನು ಪ್ರತಿ 3ನೇ ಶನಿವಾರ ವಿದ್ಯುತ್ ಅದಾಲತ್ ನಡೆಯಬೇಕೆಂದು ಇಂಧನ ಸಚಿವ ಸುನೀಲ್ಕುಮಾರ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಈ ಕುರಿತು ಆದೇಶ ಹೊರಡಿಸಿದ ಅವರು, ಪ್ರತಿ ತಿಂಗಳ 3ನೇ ಶನಿವಾರ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸೇರಿದಂತೆ ಎಲ್ಲ ಅಧಿಕಾರಿಗಳು ತಾಲೂಕಿನ ಕೊನೆ ಹಳ್ಳಿವರೆಗೆ ಭೇಟಿ ನೀಡಬೇಕು. ವಿದ್ಯುತ್ ಅದಾಲತ್ ಮಾಡಿ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಹೇಳಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್ ಸಮಸ್ಯೆಗಳ ಬಗ್ಗೆ ಅರಿತು, ತಕ್ಷಣ ಪರಿಹಾರ ನೀಡಲು ಕಾರ್ಯಕ್ರಮ ರೂಪಿಸಬೇಕು. ವಿದ್ಯುತ್ ಅದಾಲತ್ ಮಾಡಿ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಎಲ್ಲ ಹಳ್ಳಿಗಳಿಗೆ ಭೇಟಿ
ಅದಾಲತ್ ಕಾರ್ಯಕ್ರಮದಲ್ಲಿ ವ್ಯವಸ್ಥಾಪಕ ನಿರ್ದೇಶಕರಮಟ್ಟದ ಅಧಿಕಾರಿಗಳಿಂದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ವರೆಗಿನ ಅಧಿಕಾರಿಗಳು ತಾಲೂಕಿನ ಕೊನೇ ಹಳ್ಳಿವರೆಗೆ ಹೋಗಿ, ಸಮಸ್ಯೆ ಆಲಿಸಿ, ಪರಿಹಾರ ನೀಡಬೇಕು. ಎಲ್ಲರೂ ಒಂದೇ ಹಳ್ಳಿಗೆ ಭೇಟಿ ನೀಡದೆ, ಬೇರೆ ಹಳ್ಳಿಗಳಿಗೆ ಭೇಟಿ ನೀಡಿ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದ್ದಾರೆ.