ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಆರು ಸರಣಿ ರ್ಯಾಲಿಗಳನ್ನು ನಡೆಸಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ.
ಈ ಬಗ್ಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಅವರು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.
ಪ್ರಧಾನಿ ಮೋದಿ ಅವರು ಚಿತ್ರದುರ್ಗ, ಮೈಸೂರು, ಮಂಗಳೂರು, ಬೆಂಗಳೂರು, ಚಿಕ್ಕೋಡಿ, ಗಂಗಾವತಿಯಲ್ಲಿ ರ್ಯಾಲಿ ನಡೆಸಲಿರುವರು ಎಂದು ಅವರು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರು ರಾಜ್ಯದಲ್ಲಿ ನಡೆಸುವ ರ್ಯಾಲಿಗಳು
ಏ.8ಕ್ಕೆ ಚಿತ್ರದುರ್ಗ ಮತ್ತು ಮೈಸೂರಿನಲ್ಲಿ ರ್ಯಾಲಿ ನಡೆಯಲಿದೆ.
ಏ.13ಕ್ಕೆ ಮಂಗಳೂರು ಮತ್ತು ಬೆಂಗಳೂರಿನಲ್ಲಿ.
ಏ.18ಕ್ಕೆ ಚಿಕ್ಕೋಡಿ ಮತ್ತು ಗಂಗಾವತಿಯಲ್ಲಿ ರ್ಯಾಲಿ ನಡೆಯಲಿದೆ.