ರಾಜ್ಯದಲ್ಲಿ ಬರಗಾಲವಿರುವಾಗಿ ದೇವಳಕ್ಕೆ ಸಿಎಂ ರಥ ಸಮರ್ಪಣೆ ಸರಿಯೇ?

ಬೆಂಗಳೂರು: ಮುಖ್ಯಮಂತ್ರಿಯಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದಲ್ಲಿ ತಲೆದೋರಿರುವ ಸಮಸ್ಯೆಗಳನ್ನು ಬಗೆಹರಿಸುವ ಬದಲಿಗೆ ಚಿನ್ನದ ರಥ ಅರ್ಪಣೆ ಮಾಡಲು ಹೊರಟಿರುವುದು ದೌರ್ಭಾಗ್ಯದ ಸಂಗತಿಯಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು ರಾಜ್ಯದಲ್ಲಿ ಬರಗಾಲವಿದ್ದು, ಜನರ ಕುಡಿಯೋ ನೀರಿನ ಸಮಸ್ಯೆಗೆ ಕಲ್ಮಶವಾಗಿರುವ ನದಿಗಳ ಶುದ್ಧೀಕರಣ ಮಾಡುವುದಾಗಲೀ, ಕಬ್ಬು ಬೆಳೆಗಾರರಿಗೆ ಕಬ್ಬಿನ ಬಾಕಿ ಹಣ 4000 ಕೋಟಿ ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಕೂಡಿಸುವ ಬಗ್ಗೆ ಗಂಭೀರ ಚಿಂತನೆ ನಡೆಸದೆ ತಮ್ಮ ಹುದ್ದೆಯನ್ನು ಚಿನ್ನದ ರಥ ಅರ್ಪಣೆಗಾಗಿ ಮುಡಿಪಾಗಿಟ್ಟಿರುವುದು ಬೇಸರದ ಸಂಗತಿಯಾಗಿದೆ ಎಂದು ದೂರಿದ್ದಾರೆ.

ದೇವರಿಗೆ ಚಿನ್ನದ ರಥ ಉಡುಗೊರೆ ನೀಡುವುದು ವೈಯಕ್ತಿಕ ವಿಚಾರವಾಗಿದ್ದರೂ ಆರು ಕೋಟಿ ಜನರ ಪ್ರತಿನಿಧಿಯಾಗಿದ್ದೇನೆ ಎಂಬುದನ್ನು ಅವರು ಮರೆತಿದ್ದಾರೆ ಎಂದು ಹೇಳಿರುವ ಅವರು, ಮುಖ್ಯಮಂತ್ರಿಗಳು ದೇಣಿಗೆ ಸಂಗ್ರಹಿಸಲು ಮುಂದಾದರೆ ದೇಣಿಗೆ ನೀಡಲು ನೂರಾರು ಜನರು ಮುಂದೆ ಬರುತ್ತಾರೆ. ಆ ಮೂಲಕ ಮುಖ್ಯಮಂತ್ರಿಗಳಿಂದ ಇತರೆ ಕೆಲಸಗಳನ್ನು ಮಾಡಿಸಿಕೊಳ್ಳಲು ಮುಂದಾಗಬಹುದು ಎಂಬ ಉದ್ದೇಶವೂ ದೇಣಿಗೆ ನೀಡುವವರಲ್ಲಿರುತ್ತದೆ ಎಂದರು.

ಈಗ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನಂಬಿಕೆ, ಆಚಾರ, ವಿಚಾರಗಳು ವೈಯಕ್ತಿಕವಾಗಿದ್ದರೂ ಅವರು ಈ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ ಎಂಬುದನ್ನು ಮರೆಯಬಾರದು, ರಾಜ್ಯದ ಮತದಾರರು ನಾಸ್ತಿಕರು, ಆಸ್ತಿಕರು ಇರುತ್ತಾರೆ. ಆದರೆ ಇವೆಲ್ಲವನ್ನು ವೈಚಾರಿಕ ನೆಲೆಗಟ್ಟಿನಲ್ಲಿ ಚಿಂತಿಸಬೇಕಾದ ಅಗತ್ಯತೆ ಇದೆ. ರಾಜ್ಯದ ಇತರ ದೇವಾಲಯಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಭಕ್ತಾದಿಗಳು ಪರದಾಡುವಂತಾಗಿದೆ. ಜನರಿಂದ ದೇಣಿಗೆ ಎತ್ತಿ ಚಿನ್ನದ ರಥ ಅರ್ಪಣೆ ಮಾಡುವ ಬದಲು ಇತರೆ ದೇವಸ್ಥಾನಗಳ ಮೂಲಭೂತ ಸೌಕರ್ಯಗಳನ್ನಾದರೂ ಒದಗಿಸುವ ಕಾರ್ಯಕ್ಕೆ ಮುಂದಾಗಲಿ ಎಂದು ಅವರು ಆಗ್ರಹಿಸಿದ್ದಾರೆ.

Desk

Recent Posts

ಕೆಎಂಸಿ ಆಸ್ಪತ್ರೆ ಅತ್ತಾವರದಲ್ಲಿ “ನೋವು ಮುಕ್ತ ಮಂಗಳೂರು” ಅಭಿಯಾನ

ಕೆ.ಎಂ.ಸಿ. ಆಸ್ಪತ್ರೆ ಅತ್ತಾವರದ ರುಮಟಾಲಜಿ (ಸಂಧಿವಾತ) ವಿಭಾಗ ಹಾಗೂ ಫಿಸಿಕಲ್ ಮೆಡಿಸಿನ್ ಮತ್ತು ರಿಹ್ಯಾಬಿಲಿಟೇಶನ್ (ದೈಹಿಕ ಔಷಧ ಮತ್ತು ಪುನರ್ವಸತಿ)…

13 mins ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಸ್ಪೋಟ ಬೆದರಿಕೆ : ಪೊಲೀಸ್‌ ಭದ್ರತೆ

ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಪೋಟಿಸುವುದಾಗಿ ಬೆದರಿಕೆಯನ್ನು ಇಮೇಲ್‌ ಮೂಲಕ ಬಂದಿರುವುದಾಗಿ ವರದಿಯಾಗಿದೆ. ಬೆದರಿಕೆ ಹಿನ್ನಲೆಯಲ್ಲಿ ಪೊಲೀಸರು ವಿಮಾನ ನಿಲ್ದಾಣದಲ್ಲಿ…

27 mins ago

ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣ : ಮೂವರು ಭಾರತೀಯರ ಬಂಧನ

ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್‌ ಕೊಲೆ ಪ್ರಕರಣ ಹಿನ್ನಲೆ  ಈ  ಮೂವರು ಭಾರತೀಯರನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ.ರಾಯಲ್ ಕೆನಡಿಯನ್ ಮೌಂಟೆಡ್…

43 mins ago

ಸಿಟಿ ಸೆಂಟರ್ ಮಾಲ್ ಗೆ ಬಂದಿದ್ದ ಮಹಿಳೆ ನಾಪತ್ತೆ

ತನ್ನ ತಾಯಿಯೊಂದಿಗೆ ನಗರದ ಸಿಟಿ ಸೆಂಟರ್ ಮಾಲ್ ಗೆ ಬಂದಿದ್ದ ಯುವತಿ ಕಾಣೆಯಾದ ಬಗ್ಗೆ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

1 hour ago

ಪ್ರಜ್ವಲ್‌ ವಿಡಿಯೋ ಪ್ರಕರಣ: ಸಂತ್ರಸ್ತೆಯರ ನೆರವಿಗೆ ನಿಲ್ಲುವಂತೆ ಸಿದ್ದರಾಮಯ್ಯಗೆ ರಾಹುಲ್‌ ಪತ್ರ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರಿಂದ ಅತ್ಯಾಚಾರಕ್ಕೊಳಗಾಗಿರುವ ಸಂತ್ರಸ್ತೆಯರ ನೆರವಿಗೆ ನಿಲ್ಲಿ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು…

1 hour ago

ಪ್ರವಾಸಕ್ಕೆ ಬಂದಿದ್ದ ಬಾಲಕಿ ಭದ್ರಾ ನದಿಯಲ್ಲಿ ಮುಳುಗಿ ದಾರುಣ ಸಾವು

ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿಯೊಬ್ಬಳು ಸ್ನಾನ ಮಾಡಲೆಂದು ನದಿಗೆ ಇಳಿದಿದ್ದಾಗ ನೀರಿನಲ್ಲಿ ಮುಳುಗಿ ಸಾವನಪ್ಪಿರುವ ದಾರುಣ ಘಟನೆ ಕಳಸ ತಾಲೂಕಿನ…

1 hour ago