ರಾಜ್ಯದಲ್ಲಿ ಮಾರ್ಚ್‌ 28ರಂದು ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು;  ಮಹಾರಾಷ್ಟ್ರ ಕರಾವಳಿಯಲ್ಲಿನ ವಾಯುಭಾರ ಕುಸಿತದ ಪರಿಣಾಮ ಸೋಮವಾರವೂ ಮಳೆಯ ಮುನ್ಸೂಚನೆ ನೀಡಲಾಗಿದೆ.

ಉತ್ತರ ಮತ್ತು ದಕ್ಷಿಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾನುವಾರವೂ ಮಳೆಯಾಗಿದೆ.

ಬೆಂಗಳೂರು ನಗರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು,ಚಿತ್ರದುರ್ಗ, ಕೊಡಗು, ಹಾಸನ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಮಾರ್ಚ್ 28ರಂದು ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಮಹಾರಾಷ್ಟ್ರ ಕರಾವಳಿಯಲ್ಲಿನ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಮಳೆಯ ಜೊತೆ ಗುಡು ಮತ್ತು ಸಿಡಿಲಿನ ಅಬ್ಬರವು ಜೋರಾಗಿ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಸಾಮಾನ್ಯ ಬೇಸಿಗೆಗೆ ಹೋಲಿಕೆ ಮಾಡಿದರೆ ಈ ಬಾರಿ ಮಾರ್ಚ್ ತಿಂಗಳ ಅಂತ್ಯದಲ್ಲಿಯೇ ತಾಪಮಾನದಲ್ಲಿ ಭಾರೀ ಏರಿಕೆಯಾಗಿದೆ. ಆದ್ದರಿಂದ ಉತ್ತರ ಒಳನಾಡಿನ ಬೆಳಗಾವಿ, ಗದಗ, ಹಾವೇರಿ ಮತ್ತು ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿಯೂ ಸೋಮವಾರ ಮಳೆ ಮುನ್ಸೂಚನೆ ನೀಡಲಾಗಿದೆ.

ಕರ್ನಾಟಕ ಮಾತ್ರವಲ್ಲ ಕೇರಳ, ತಮಿಳುನಾಡು ರಾಜ್ಯಗಳ ಕೆಲವು ಭಾಗಗಳಲ್ಲಿಯೂ ಸೋಮವಾರ ಗುಡುಗು ಸಹಿತ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಆಂಧ್ರ ಪ್ರದೇಶದ ಕರಾವಳಿ ಭಾಗ, ರಾಯಲಸೀಮಾ ಭಾಗದಲ್ಲಿ ಸೋಮವಾರ ಮಳೆಯ ಅಬ್ಬರ ಹೆಚ್ಚಿರಲಿದೆ. ಮುಂದಿನ ನಾಲ್ಕು ದಿನಗಳ ಕಾಲ ಕೇರಳ, ತಮಿಳುನಾಡು, ಆಂಧ್ರ ಪ್ರದೇಶದ ಕರಾವಳಿ ಭಾಗದಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

Swathi MG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

6 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

7 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

7 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

9 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago