News Karnataka Kannada
Tuesday, April 30 2024
ಬೆಂಗಳೂರು ನಗರ

ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ: ಹವಾಮಾನ ಇಲಾಖೆ

Heavy rain warning issued for these districts till December 1
Photo Credit :

ಬೆಂಗಳೂರು, ಮೇ.17: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ತೇವಾಂಶಭರಿತ ಮೋಡಗಳ ಪರಿಣಾಮ ರಾಜ್ಯದ ಹಲವೆಡೆ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ. ಜೊತೆಗೆ ಮೇ 18ರಿಂದ ಇನ್ನಷ್ಟು ಮಳೆ ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಇಲಾಖಾ ವತಿಯಿಂದ ಆರೆಂಜ್ ಆಲರ್ಟ್ ಘೋಷಣೆಯಾಗಿದ್ದು, ‌ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಇನ್ನು ಮುಂದಿನ ಮೂರು ದಿನಗಳ ಕಾಲ‌ನಗರ ಪ್ರದೇಶಗಳಲ್ಲಿ ಸಂಜೆಯ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದ್ದು, ಗುಡುಗು ಸಿಡಿಲಿನಿಂದ ಭಾರೀ ಪ್ರಮಾಣದ ಮಳೆಯಾಗುವ ಸಂಭವವಿದೆ. ನಿನ್ನೆ ಸಂಜೆ ಬೆಂಗಳೂರಿನಾದ್ಯಂತ ಮಳೆಯಾಗಿದೆ. ಜೊತೆಗೆ ರಾಜ್ಯದ ಕೆಲವೆಡೆ ವರುಣ ತಂಪೆರೆದಿದ್ದಾನೆ.

ಇನ್ನೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಇಂದು (ಮೇ17) ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜೊತೆಗೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಬಳ್ಳಾರಿ, ಮಂಡ್ಯ, ಚಿತ್ರದುರ್ಗ, ಮೈಸೂರು, ದಾವರಣಗೆರೆಯಲ್ಲಿ ಮುಂದಿನ ನಾಲ್ಕು ದಿನ, ರಾಯಚೂರು, ಬೀದರ್, ಕಲಬುರಗಿ, ವಿಜಯಪುರ, ಕೊಪ್ಪಳ, ಯಾದಗಿರಿ, ಹಾವೇರಿ, ಗದಗ, ಬಾಗಲಕೋಟೆ ಮತ್ತು ಬೆಳಗಾವಿಯಲ್ಲಿ ಮುಂದಿನ 48ಗಂಟೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು