ರಾಜ್ಯದಲ್ಲಿ ವೈಲ್ಡ್ ಸಫಾರಿ ದರ ಹೆಚ್ಚಳ

ಬೆಂಗಳೂರು: ಹುಲಿ ಅಭಯಾರಣ್ಯ, ರಾಷ್ಟ್ರೀಯ ಉದ್ಯಾನವನ ಮತ್ತು ಅಭಯಾರಣ್ಯಗಳಲ್ಲಿ ವನ್ಯಜೀವಿಗಳ ಸಫಾರಿಗೆ ದರವನ್ನು ಅರಣ್ಯ ಇಲಾಖೆ ಏಕಾಏಕಿ ಹೆಚ್ಚಳ ಮಾಡಿದೆ.

ಈ ನಿರ್ಧಾರಕ್ಕೆ ಎಲ್ಲೆಡೆಯಿಂದ ಟೀಕೆ ವ್ಯಕ್ತವಾಗಿದ್ದು,ಸೋಷಿಯಲ್ ಮೀಡಿಯಾದಲ್ಲಿ ಮೀಮ್ಸ್, ಸಂದೇಶ, ಫೋಟೋಗಳು ಮತ್ತು ಜೋಕ್ಸ್ ಗಳು ಹರಿದಾಡುತ್ತಿವೆ. ನಾಗರಹೊಳೆ ಹುಲಿ ಅಭಯಾರಣ್ಯದಲ್ಲಿ ಕಬಿನಿ ಸಾಮಾನ್ಯವಾಗಿ ಶ್ರೀಮಂತ ಮತ್ತು ಸಮಾಜದ ಮೇಲ್ವರ್ಗದವರು ಸಫಾರಿ ನಡೆಸುವ ಜಾಗವಾಗಿದೆ. ಆದರೆ ಇಲ್ಲಿ ಸಫಾರಿಗೆ ದರ ಹೆಚ್ಚಿಸಿದ್ದು ಮೇಲ್ವರ್ಗದವರನ್ನು ಸಹ ಚಿಂತೆಗೀಡು ಮಾಡಿದೆ. ಕಬಿನಿ ಪ್ರವಾಸ ದುಬಾರಿ ಎಂದು ಜನರು ಭಾವಿಸುತ್ತಿದ್ದಾರೆ.

ನಾಲ್ಕು ವರ್ಷಗಳಿಗೊಮ್ಮೆ ಸಫಾರಿ ದರ ಪರಿಷ್ಕರಿಸಲಾಗುತ್ತದೆ. ಕಳೆದ ಬಾರಿ 2017-18ರಲ್ಲಿ ಪರಿಷ್ಕರಿಸಲಾಗಿತ್ತು. ಎಲ್ಲಾ ಅರಣ್ಯ ಪ್ರದೇಶಗಳಲ್ಲಿ ಒಂದೇ ರೀತಿಯ ದರವನ್ನು ಹೆಚ್ಚಿಸಲಾಗಿತ್ತು. ಆದರೆ ಈ ಬಾರಿ ಪ್ರತಿ ಅರಣ್ಯ ಪ್ರದೇಶದಲ್ಲಿ ದರ ವಿಭಿನ್ನವಾಗಿದೆ. ಅನಗತ್ಯವಾಗಿ ಫೋಟೋಗ್ರಫಿ, ವಿಡಿಯೊ ಮಾಡುವವರನ್ನು, ಜನದಟ್ಟಣೆಯನ್ನು ತಡೆಯುತ್ತದೆ ಎಂದು ಅರಣ್ಯಾಧಿಕಾರಿಗಳು ದರ ಹೆಚ್ಚಳವನ್ನು ಸಮರ್ಥಿಸಿಕೊಳ್ಳುತ್ತಾರೆ.

ದರ ಹೆಚ್ಚಳ ಸಾಮಾನ್ಯ ಜನರಿಗೆ ಅಸಮಾಧಾನ ತಂದಿದ್ದು, ಮಕ್ಕಳಿಗೆ ಇನ್ನೂ ಮೊಬೈಲ್ ಮೂಲಕವೇ ಪ್ರಾಣಿಗಳನ್ನು ತೋರಿಸಬೇಕಾದ ಸ್ಥಿತಿ ಬಂದಿದೆ ಎಂದು ಬೇಸರ ವ್ಯಕ್ತ ಪಡಿಸುತ್ತಿದ್ದಾರೆ.

Desk

Recent Posts

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

9 mins ago

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

16 mins ago

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

26 mins ago

ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ಬಂದಿದೆ ಹಸಿರು ಕಳೆ

ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ.  ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…

37 mins ago

ಆರ್​ಸಿಬಿಗೆ ಟ್ವೀಟ್​ ಮೂಲಕ ವಿಜಯ್​ ಮಲ್ಯ ಅಭಿನಂದನೆ

ಶನಿವಾರ ತಡರಾತ್ರಿ ನಡೆದ ಐಪಿಎಲ್​ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಹಾಲಿ ಚಾಂಪಿಯನ್​…

47 mins ago

ತಾಯಿಯ ಶವದ ಜೊತೆಗೆ ನಾಲ್ಕು ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…

53 mins ago