ಬೆಂಗಳೂರು : ರಾಜ್ಯದಲ್ಲಿ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೊಳಿಸುವ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು ಎಂದು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಶೀಘ್ರವೇ ಕ್ರೀಡಾ ವಿವಿ ಸ್ಥಾಪಿಸಲಾಗುವುದು. ಎಲ್ಲಾ ಕ್ರೀಡೆಗಳು ಒಂದೇ ಭಾಗದಲ್ಲಿ ಲಭ್ಯವಾಗುವಂತೆ ಮಾಡುವ ನಿಟ್ಟಿನಲ್ಲಿ ಯಲಹಂಕ ಬಳಿಯಲ್ಲಿ 100 ಎಕರೆ ಜಾಗವನ್ನು ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಕ್ರೀಡಾ ಇಲಾಖೆಯಲ್ಲಿ ಖಾಲಿಇರುವ ತರಬೇತುದಾರರನ್ನು ಶೀಘ್ರದಲ್ಲಿ ಭರ್ತಿ ಮಾಡಿಕೊಳ್ಳಲಾಗುವುದು. ಅವರಿಗೆ ಕೊಡುತ್ತಿರುವ ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.