ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಇಲ್ಲ; ಸಚಿವ ಡಾ. ಸುಧಾಕರ್ ಸ್ಪಷ್ಟನೆ

ಬೆಂಗಳೂರು : ‘ಖಂಡಿತವಾಗಿಯೂ ಸಂಪೂರ್ಣ ಲಾಕ್ ಡೌನ್ ಮಾಡುವ ವಿಚಾರವನ್ನು ಸರಕಾರ ಮಾಡಿಲ್ಲ’ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಶುಕ್ರವಾರ ಬೆಳಗ್ಗೆ ಹೇಳಿಕೆ ನೀಡಿದ್ದಾರೆ.

ಸದಾಶಿವ ನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ‘ಪ್ರಾರಂಭದಿಂದ ಹೇಳುತ್ತಿದ್ದೇನೆ. ವಿಶ್ವವ್ಯಾಪಿಯಾಗಿ ಹರಡುತ್ತಿರುವ ಪ್ರಕರಣಗಳನ್ನು ಸಂಪೂರ್ಣವಾಗಿ ತಡೆಯಲು ಸಾಧ್ಯವಿಲ್ಲ,ಅಂತರ್ ರಾಷ್ಟ್ರೀಯ ವಿಮಾನ ಬಂದ್ ಮಾಡಿಲ್ಲ, ಆದರೆ ನಿಯಂತ್ರಣ ಮಾಡಲು, ಕಡಿಮೆ ಮಾಡಲು ಸಾಧ್ಯವಿದೆ’ ಎಂದರು.

‘ನಮಗೆ ಆಗ ಗೊತ್ತಿರಲಿಲ್ಲ ಹಾಗಾಗಿ ಲಾಕ್ ಡೌನ್ ಮಾಡಬೇಕಾಯಿತು. ರೋಗಾಣುವಿನ ಸ್ಪಷ್ಟ ಚಿತ್ರಣ ಇಲ್ಲದಿರುವಾಗ ನಾವು ಆ ನಿರ್ಣಯ ತೆಗೆದುಕೊಂಡಿದ್ದೇವೆ, . ಈಗ 2 ವರ್ಷದ ಅನುಭವ ಆಗಿದೆ.ನಾವು ಎದುರಿಸುತ್ತೇವೆ, ಹೋರಾಟ ಮಾಡುತ್ತೇವೆ, ಅಲೆ ಬಂತು ಎಂದು ಹೆದರುವುದಿಲ್ಲ. ಅಲೆ ಬಂದಾಗ ಬಗ್ಗಬೇಕು ಮತ್ತು ಎದುರಿಸಬೇಕು’ ಎಂದರು.

‘ಲಾಕ್ ಡೌನ್ ವಿಚಾರವನ್ನೇ ಸರಕಾರ ಮಾಡಿಲ್ಲ, ಜನಸಾಮಾನ್ಯರಿಗೆ ತೊಂದರೆ ಕೊಡದೆ ಇರುವಂತಹ ವಿನೂತನ, ವಿಶಿಷ್ಟ ಪ್ರಯತ್ನ ಸೋಂಕು ತಡೆಗೆ ನಮ್ಮ ಸರಕಾರ ಮಾಡುತ್ತದೆ’ ಎಂದು ಸ್ಪಷ್ಟಪಸಿದರು.

‘ಪಾಸಿಟಿವಿಟಿ ರೇಟ್ ತಡೆಯಲು ಜನರ ಸಹಕಾರ ತೆಗೆದುಕೊಂಡು ಯಾವುದೇ ಆರ್ಥಿಕ, ವಾಣಿಜ್ಯ ಚಟುವಟಿಕೆಗಳಿಗೆ ತೊಂದರೆಯಾಗದಂತೆ , ಜನಸಾಮಾನ್ಯರ ಬದುಕಿಗೆ ತೊಂದರೆಯಾಗದಂತೆ ಇತಿಮಿತಿಯಲ್ಲಿ ಸಾಧಕ ಬಾಧಕ ಗಳ ಬಗ್ಗೆ ಅರಿತು ಕ್ರಮ ಕೈಗೊಳ್ಳುತ್ತೇವೆ’ ಎಂದರು.

‘ರಾಜ್ಯದಲ್ಲಿ 99 % ಮೊದಲ ಡೋಸ್ ಪೂರ್ಣವಾಗಿದೆ.80 % 2 ನೇ ಡೋಸ್ ಪೂರ್ಣವಾಗಿದ್ದು ನಾವು ಉತ್ತಮ ಸಾಧನೆ ಮಾಡಿದ್ದೇವೆ’ ಎಂದರು.’15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ವೇಗ ಪಡೆದಿದ್ದು, 4 ದಿನಕ್ಕೆ 42 % ಆಗಿದೆ,ಇಡೀ ದೇಶದಲ್ಲಿ ನಾವು ಎರಡನೇ ಸ್ಥಾನದಲ್ಲಿದ್ದೇವೆ ಆಂಧ್ರ ನಮಗಿಂತ ಮುಂದಿದೆ’ ಎಂದರು.

’64 ಲಕ್ಷದ 27 ಸಾವಿರ ಡೋಸ್ ಲಸಿಕೆ ನಮ್ಮಲ್ಲಿ ದಾಸ್ತಾನು ಇದೆ. ಯಾವುದೇ ಕೊರತೆ ಇಲ್ಲ’ ಎಂದು ಸಚಿವರು ತಿಳಿಸಿದರು.‘ಪಾಸಿಟಿವ್ ರೇಟ್ ರಾಜ್ಯದಲ್ಲಿ 3.95 % ಆಗಿದೆ, ಬೆಂಗಳೂರು ನಗರ , ಗ್ರಾಮಾಂತರ, ಮಂಡ್ಯ, ಮೈಸೂರು, ಉಡುಪಿ ಮತ್ತು ಕೋಲಾರದಲ್ಲಿ ಹೆಚ್ಚು ಪಾಸಿಟಿವ್ ಆಗುತ್ತಿದೆ.ಅದನ್ನು ತಡೆಯಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದರು.

‘ವಿಶ್ವ ಆರೋಗ್ಯ ಸಂಸ್ಥೆ ಸುದ್ದಿಗೋಷ್ಠಿಯಲ್ಲಿ ಹೇಳಿದ, ಒಂದು ರಾಜ್ಯ, ಒಂದು ದೇಶದಲ್ಲಿ ಸಂಪೂರ್ಣ ಲಸಿಕಾಕರಣ ಆದರೆ ಸೋಂಕು ತಡೆಯಲು ಸಾಧ್ಯವಿಲ್ಲ. ವಿಶ್ವದಲ್ಲಿ ಸಂಪೂರ್ಣ ಲಸಿಕಾಕರಣವಾದರೆ ಮಾತ್ರ ಸೋಂಕು ನಿರ್ಮೂಲನೆ ಸಾಧ್ಯ’ ಎನ್ನುವ ವಿಚಾರ ಉಲ್ಲೇಖಿಸಿದರು.

‘ದೂರದೃಷ್ಟಿಯ ನಾಯಕ ನರೇಂದ್ರ ಮೋದಿ ಅವರು ನಮ್ಮ ದೇಶಕ್ಕೆ ಸಿಕ್ಕಿರುವುದು ಹೆಮ್ಮೆ , ಅನೇಕ ಬಡ ದೇಶಗಳು , ಲಭ್ಯತೆ ಇಲ್ಲದ ದೇಶಗಳಿಗೆ ಉಚಿತವಾಗಿ ಸರಬರಾಜು ಮಾಡಿದ್ದಾರೆ. ವಸುದೈವ ಕುಟುಂಬಕಂ ಮಾತಿನಂತೆ ಕರ್ತವ್ಯ ಮಾಡಿದ್ದಾರೆ’ ಎಂದರು.

Gayathri SG

Recent Posts

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

11 mins ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

8 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

8 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

8 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

8 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

8 hours ago