ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಮೂರನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದು,ಈಗಾಗಲೇ ರಾಜ್ಯದಲ್ಲಿ ಜಾರಿಯಲ್ಲಿರುವ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಅವಧಿ ನಾಳೆ ಮುಗಿಯಲಿದ್ದು, ನಾಳೆಯಿಂದ ಮತ್ತಷ್ಟು ಕಠಿಣ ನಿಯಮ ಜಾರಿಗೊಳಿಸಬೇಕೇ ಎಂಬುದರ ಬಗ್ಗೆ ಹಾಗೂ ಸಧ್ಯದ ನಿಯಮ ಜನವರಿ 31ರವರೆಗೂ ಮುಂದುವರೆಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ ಇಂದು ಸಂಜೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಯಲಿದೆ.

ಶಾಲಾ-ಕಾಲೇಜುಗಳಲ್ಲಿ ಹಾಗೂ ಹಲವು ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ನಿಟ್ಟಿನಲ್ಲಿ ಶಾಲಾ-ಕಾಲೇಜಿಗೆ ರಜೆ ಘೋಷಿಸುವಂತೆಯೂ ಅಧಿಕಾರಿಗಳು ಸಭೆಯಲ್ಲಿ ಸಲಹೆ ನೀಡಲಿದ್ದಾರೆ.

ಅಲ್ಲದೇ ಫೆಬ್ರವರಿ ಮೊದಲ ವಾರದಲ್ಲಿ ಕೋವಿಡ್ ಕೇಸ್ ಮತ್ತಷ್ಟು ಹೆಚ್ಚುವ ಸಾಧ್ಯತೆ ದಟ್ಟವಾಗಿರುವುದರಿಂದ ರಾಜ್ಯಾದ್ಯಂತ ಕೆಲ ವಾರ ಬಿಗಿ ನಿಯಮ ಜಾರಿಗೊಳಿಸುವ ಅಗತ್ಯವಿದೆ ಎಂಬ ಸಲಹೆ ಈಗಾಗಲೇ ರಾಜ್ಯ ಸರ್ಕಾರದ ಮುಂದೆ ಬಂದಿದೆ ಎನ್ನಲಾಗಿದೆ.

ಅಲ್ಲದೇ ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ನಿಗಾ ವಹಿಸುವ ನಿಟ್ಟಿನಲ್ಲಿ ಹಲವು ಮುಂಜಾಗೃತಾ ಕ್ರಮ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಒಟ್ಟಾರೆ ರಾಜ್ಯದಲ್ಲಿ ಕೈಗೊಳ್ಳಬೇಕಿರುವ ಮತ್ತಷ್ಟು ಟಫ್ ರೂಲ್ಸ್ ಬಗ್ಗೆ ಸಿಎಂ ನೇತೃತ್ವದಲ್ಲಿ ಇಂದೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

Swathi MG

Recent Posts

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

15 mins ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

33 mins ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

47 mins ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

58 mins ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

1 hour ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

2 hours ago