ಬೆಂಗಳೂರು : ರಾಜ್ಯದಲ್ಲಿ ಕೊರೊನಾ 3 ನೇ ಅಲೆ 2 ರಿಂದ 3 ವಾರಗಳಲ್ಲಿ ತೀವ್ರತೆ ಕಳೆದುಕೊಳ್ಳಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನತಾಡಿದ ಅವರು, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಆಗಿರುವುದು ಸಮಾಧಾನ ತಂದಿದೆ. ವೈಜ್ಞಾನಿಕವಾಗಿ ಪರಾಮರ್ಶೆ ಮಾಡಿ, ತಜ್ಞರ ಅಭಿಪ್ರಾಯ ಪಡೆದು ಸರ್ಕಾರ ವೀಕೆಂಡ್ ಕರ್ಫ್ಯೂ ರದ್ದು ಮಾಡಿದೆ ಎಂದು ಹೇಳಿದರು.
ರಾಜ್ಯದಲ್ಲಿ ಒಂದು ವೇಳೆ ಮತ್ತೆ ಕೊರೊನಾ ಸೋಂಕಿತರು ಆಸ್ಪತ್ರೆಗಳಿಗೆ ದಾಖಲಾಗುವುದು ಗಣನೀಯವಾಗಿ ಹೆಚ್ಚಾದರೆ ರಾಜ್ಯ ಸರ್ಕಾರ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡಲಿದೆ ಎಂದು ತಿಳಿಸಿದರು.