ರಾಜ್ಯದಲ್ಲಿ 402 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,94,963ಕ್ಕೆ ಏರಿಕೆ ಆಗಿದೆ. ಇತ್ತ 277 ಮಂದಿ ಡಿಸ್ಚಾರ್ಜ್ ಆಗಿದ್ದು, ಈವರೆಗೆ ಒಟ್ಟು 29,50,130 ಸೋಂಕಿತರು ಗುಣಮುಖರಾಗಿದ್ದಾರೆ.
ಇಂದು 6 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 38,193ಕ್ಕೆ ಹೆಚ್ಚಿದೆ. ಸದ್ಯ 6,492 ಸಕ್ರಿಯ ಪ್ರಕರಣಗಳಿವೆ. ಸೋಂಕಿತರ ಪ್ರಮಾಣ ಶೇ.0.60ರಷ್ಟಿದ್ದರೆ, ಸಾವಿನ ಪ್ರಮಾಣ ಶೇ.1.49 ರಷ್ಟಿದೆ.