ಬೆಂಗಳೂರು: ಕೋವಿಡ್-19ನಿಂದಾಗಿ ಮುಚ್ಚಲ್ಪಟ್ಟಿದ್ದ ಕಾಲೇಜು ಹಾಗೂ ವಿಶ್ವ ವಿದ್ಯಾನಿಲಯಗಳನ್ನು ಶುಕ್ರವಾರ ಆರಂಭಿಸಲಾಗಿದೆ.
ಕೋವಿಡ್-19 ಪರೀಕ್ಷೆಯು ವಿದ್ಯಾರ್ಥಿಗಳಿಗೆ ಕಡ್ಡಾಯವಲ್ಲ ಹಾಗೂ ತರಗತಿಗೆ ಹಾಜರಾಗುವುದು ಕಡ್ಡಾಯ ಮಾಡಿಲ್ಲ ಎಂದು ರಾಜ್ಯ ಸರ್ಕಾರದ ಸುತ್ತೋಲೆಯಲ್ಲಿ ಹೇಳಲಾಗಿದೆ.
ಅಂತಿಮ ಸೆಮಿಸ್ಟರ್ ತರಗತಿಯು ಡಿಸೆಂಬರ್ 17ರಂದು ಆರಂಭವಾಗಿದೆ. ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಯು ಜನವರಿ 1ರಿಂದ ಆರಂಭವಾಗಿದೆ.
ಹತ್ತು ತಿಂಗಳ ಬಳಿಕ ಕಾಲೇಜು ಆರಂಭವಾಗಿದ್ದು, ಬೆಂಗಳೂರಿನಲ್ಲಿ 8 ಗಂಟೆಗೆ ಕಾಲೇಜು ಆರಂಭವಾಗಿದೆ. ಇದರಿಂದಾಗಿ ಎರಡು ಪಾಳಿಯಲ್ಲಿ ತರಗತಿಗಳನ್ನು ನಡೆಸಲು ಅನುಕೂಲವಾಗಲಿದೆ.