ಬೆಂಗಳೂರು : ರಾಜ್ಯದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕು ವೇಗವಾಗಿ ಹರಡುತ್ತಿದ್ದು, ರಾಜ್ಯದ 5 ಜಿಲ್ಲೆಗಳಿಗೆ ಕಂಟಕವಾಗಲಿದೆ,ಕೊರೊನಾ 3 ನೇ ಅಲೆಯಲ್ಲಿ ಒಮಿಕ್ರಾನ್ ವೇಗವಾಗಿ ಹರಡುತ್ತಿದೆ. 2 ಡೋಸ್ ಲಸಿಕೆ ಪಡೆಯದವರ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ನಗರ, ಮೈಸೂರು, ಮಂಡ್ಯ, ಉಡುಪಿ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ.
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇನ್ನೂ ಹೆಚ್ಚಳವಾಗುವ ಸಾಧ್ಯತೆ ಇದೆ. ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಕೂಡ ಮಾಹಿತಿ ನೀಡಿದೆ.ಹಾಗಾಗಿ ಎಲ್ಲರೂ ಕಡ್ಡಾಯವಾಗಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು. ಎರಡು ಡೋಸ್ ಲಸಿಕೆ ಪಡೆದರೆ ಸಾವು ನೋವು ತಪ್ಪಿಸಬಹುದು ಎಂದು ಹೇಳಿದ್ದಾರೆ.