ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಹೆಚ್ಚಾಗಿರುವುದರಿಂದ ರಾಜ್ಯದಲ್ಲಿ ಇಂದಿನಿಂದ ಜನವರಿ 15ರವರೆಗೆ 4 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಕೋಲಾರ ಜಿಲ್ಲೆಗಳಲ್ಲಿ ಜನವರಿ 13 ಮತ್ತು 14ರಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಾಳೆ ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.