ರಾಜ್ಯದ ಕೋವಿಡ್ ಸ್ಥಿತಿಗತಿ : ಸಿಎಂ ನೇತೃತ್ವದ ಸಭೆಯ ನಿರ್ಣಯಗಳು

ಬೆಂಗಳೂರು: ರಾಜ್ಯದ ಕೋವಿಡ್ ಸ್ಥಿತಿಗತಿಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನಲ್ಲಿ ಹಿರಿಯ ಅಧಿಕಾರಿಗಳು ಮತ್ತು ತಾಂತ್ರಿಕ ಸಲಹಾ ಸಮಿತಿಯ ಸದಸ್ಯರ ವರ್ಚುವಲ್ ಸಭೆ ನಡೆಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಆರ್.ಟಿ. ನಗರ ನಿವಾಸದಿಂದ ಸಭೆಯಲ್ಲಿ ವರ್ಚುವಲ್ ಆಗಿ ಭಾಗವಹಿಸಿದ್ದರು.

ಸಭೆಯಲ್ಲಿ ಸಚಿವರಾದ ಡಾ. ಕೆ. ಸುಧಾಕರ್, ಬಿ.ಸಿ. ನಾಗೇಶ್, ಆರಗ ಜ್ಞಾನೇಂದ್ರ, ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಸುದರ್ಶನ್ ಮತ್ತು ಇತರ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಿಎಂ ನೇತೃತ್ವದ ಸಭೆಯ ಮುಖ್ಯಾಂಶಗಳು:

* ಕೋವಿಡ್ ಮುಂಜಾಗ್ರತೆ ಕ್ರಮವಾಗಿ ಜಾರಿಗೊಳಿಸುವ ಮಾರ್ಗಸೂಚಿಗಳನ್ನು ಈ ತಿಂಗಳ ಅಂತ್ಯದವರೆಗೆ ವಿಸ್ತರಿಸಲು ನಿರ್ಧಾರ.

* ಶಾಲಾ ಮಕ್ಕಳಲ್ಲಿ ಕೋವಿಡ್ ಹೆಚ್ಚುತ್ತಿರುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಪ್ರಕರಣಗಳನ್ನು ಆಧರಿಸಿ ಬಿಇಓ ಮತ್ತು ತಾಲೂಕು ಆರೋಗ್ಯಾಧಿಕಾರಿಗಳ ವರದಿಯನ್ನು ಆಧರಿಸಿ, ಶಾಲೆಗಳನ್ನು ಮುಚ್ಚುವ ಕುರಿತು ತೀರ್ಮಾನ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲು ತೀರ್ಮಾನ.

* ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತ ಮಕ್ಕಳಿಗೆ ಚಿಕಿತ್ಸೆ ನೀಡಲು ಮಕ್ಕಳ ವಾರ್ಡ್, ಐಸಿಯುಗಳನ್ನು ಮೀಸಲಿರಿಸಲು ಸೂಚನೆ.

* ಕೋವಿಡ್ ಸೋಂಕಿತ ಮಕ್ಕಳ ಚಿಕಿತ್ಸೆಗೆ ಅಗತ್ಯವಿರುವ ಔಷಧಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಮಾಡಿಕೊಳ್ಳುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಲು ನಿರ್ಧಾರ.

* ಶಿಕ್ಷಣ ಮತ್ತು ಆರೋಗ್ಯ ಇಲಾಖೆಗಳು ಜಂಟಿಯಾಗಿ ಎಲ್ಲ ಶಾಲೆಗಳಲ್ಲಿ 15 ದಿನಗಳಿಗೊಮ್ಮೆ ಮಕ್ಕಳ ಸಾಮಾನ್ಯ ಆರೋಗ್ಯ ತಪಾಸಣೆ ಮಾಡುವಂತೆ ಸೂಚನೆ.

* ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮವಾಗಿ ವಿಧಿಸಿರುವ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ.

* ಮೂರನೇ ಅಲೆಯಲ್ಲಿ ಹೋಮ್ ಐಸೋಲೇಷನ್‌ನಲ್ಲಿ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇವರ ಆರೋಗ್ಯ ಸ್ಥಿತಿಯ ಮೇಲ್ವಿಚಾರಣೆಯನ್ನು ನಿಯಮಿತವಾಗಿ ಮಾಡುವಂತೆ ಹಾಗೂ ಸೂಕ್ತ ಔಷಧಿಗಳ ಕಿಟ್ ಒದಗಿಸುವಂತೆ ನಿರ್ದೇಶನ.

* ಪರೀಕ್ಷಾ ವರದಿ ಬಂದ ಕೂಡಲೇ ಸೋಂಕಿತರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿ, ಆಸ್ಪತ್ರೆಗೆ ದಾಖಲಿಸುವ ಅಗತ್ಯವಿದೆಯೇ ಇಲ್ಲವೇ ಎಂದು ನಿರ್ಧರಿಸುವ ಟ್ರಯಾಜಿಂಗ್ ವ್ಯವಸ್ಥೆಯನ್ನು ಬಲಪಡಿಸುವಂತೆ ಸೂಚನೆ.

* ಹೋಮ್ ಐಸೊಲೇಷನ್ ಮತ್ತು ಟ್ರಯಾಜಿಂಗ್ ಪ್ರಕ್ರಿಯೆಯಲ್ಲಿ ಹೌಸ್ ಸರ್ಜನ್ ವೈದ್ಯರು ಹಾಗೂ ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ನಿರ್ಧಾರ.

* ಬೆಂಗಳೂರಿನಲ್ಲಿ ಕೂಡಲೇ 27 ಕೋವಿಡ್ ಕೇರ್ ಸೆಂಟರುಗಳನ್ನು ಪ್ರಾರಂಭಿಸಲು ಸೂಚನೆ.

* ಮುಂಬರುವ ಸಂಕ್ರಾಂತಿ, ವೈಕುಂಠ ಏಕಾದಶಿ ಮತ್ತಿತರ ಹಬ್ಬಗಳ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸುವಂತೆ ಕಂದಾಯ ಮತ್ತು ಮುಜರಾಯಿ ಇಲಾಖೆಗೆ ಸೂಚನೆ.

* ಕೋವಿಡ್ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದು 9 ತಿಂಗಳು ಪೂರೈಸಿದ ಮುಂಚೂಣಿಯ ಕಾರ್ಯಕರ್ತರಿಗೆ 3ನೇ ಡೋಸ್ ಅನ್ನು ಆದ್ಯತೆಯ ಮೇರೆಗೆ ನೀಡಲು ಸೂಚನೆ.

* ಬಿಬಿಎಂಪಿ ವ್ಯಾಪ್ತಿಯಲ್ಲಿ ಪರೀಕ್ಷಾ ಪ್ರಮಾಣವನ್ನು ದಿನಕ್ಕೆ 1.3 ಲಕ್ಷ ವರೆಗೆ ಹೆಚ್ಚಿಸಲು ಸೂಚನೆ.

* ಯಾವುದೇ ರೀತಿಯ ಸಾರ್ವಜನಿಕ ಸಮಾವೇಶಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಯಿತು.

* ಮಾರುಕಟ್ಟೆ ಪ್ರದೇಶದಲ್ಲಿ ಜನದಟ್ಟಣೆ ಕಡಿಮೆಗೊಳಿಸಲು ವಸ್ತುಸ್ಥಿತಿ ಆಧರಿಸಿ ಕ್ರಮ ಕೈಗೊಳ್ಳುವಂತೆ ಸೂಚನೆ.

ರಾಜ್ಯದಲ್ಲಿ ಯಾವುದೇ ರೀತಿಯ ಸಿದ್ಧತೆಯಲ್ಲಿ ಲೋಪವಾಗದಂತೆ ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Sneha Gowda

Recent Posts

ಪೈಲಟ್‌ಗಳ ಸಾಮೂಹಿಕ ರಜೆ : 70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

ಅನಾರೋಗ್ಯದಿಂದ ನೆಪವೊಡ್ಡಿ ಹಿರಿಯ ಪೈಲೆಟ್‌ಗಳು ಸಾಮೂಹಿಕವಾಗಿ ರಜೆಯಲ್ಲಿ ತೆರಳಿರುವ ಪರಿಣಾಮ ಸುಮಾರು 70ಕ್ಕೂ ಅಧಿಕ ಏರ್‌ ಇಂಡಿಯಾ ಎಕ್ಸ್‌ ಪ್ರೆಸ್‌…

6 mins ago

ಪ್ರಿಯತಮೆ ಎದುರೇ ಮಹಿಳೆ ಮೇಲೆ ಅತ್ಯಾಚಾರ ಮಾಡಿ ಕೊಂದ ಪಾಪಿ!

ಪ್ರಿಯತಮೇ ಎದುರೆ ಓರ್ವ ಮಹಿಳೆ ಮೇಲೆ ಅತ್ಯಾಚಾರ ಎಸಗಿ ನಂತರ ಕೊಂದ ಪಾಪಿ ಪ್ರಿಯತಮ. ಈ ಘಟನೆ ಗೌರಿಬಿದನೂರು ತಾಲ್ಲೂಕಿನ…

33 mins ago

ಬೂತ್​ನಲ್ಲಿ ಲಕ್ಕಿ ಡ್ರಾ : ಮತ ಚಲಾಯಿಸಿದ ಮತದಾರನಿಗೆ ಸಿಕ್ತು ವಜ್ರದ ಉಂಗುರ

ಭೋಪಾಲ್​ನ ಪ್ರತಿ ಬೂತ್​ನಲ್ಲಿ ಲಕ್ಕಿ ಡ್ರಾ ನಡೆಸಲಾಗಿದೆ. ಅದರಲ್ಲಿ ಅದೃಷ್ಟಶಾಲಿ ಮತದಾರರಿಗೆ ಉಡುಗೊರೆ ಸಿಗಲಿದೆ ಎಂದು ಘೋಷಣೆ ಮಾಡಲಾಗಿತ್ತು. ಹೀಗೇ…

49 mins ago

ಹೊಸ ಕೋವಿಡ್-19 ರೂಪಾಂತರ ಯುಎಸ್‌ನಲ್ಲಿ ಪತ್ತೆ!

ಯುನೈಟೆಡ್ ಸ್ಟೇಟ್ಸ್‌ನಲ್ಲಿ ಪತ್ತೆಯಾದ ಈ ಭಿನ್ನ ಗುಂಪನ್ನು ತೀವ್ರ ತೀವ್ರ ಉಸಿರಾಟದ ಸಿಂಡ್ರೋಮ್ ಕೊರೊನಾ ವೈರಸ್ 2 (SARS-CoV-2) ಫ್ಲರ್ಟ್…

1 hour ago

ಇವಿಎಂ,ಚುನಾವಣಾ ಸಿಬ್ಬಂದಿ ಇದ್ದ ಬಸ್‌ಗೆ ಬೆಂಕಿ : ಯಂತ್ರಗಳು ಡ್ಯಾಮೇಜ್‌

ಚುನಾವಣೆ ಬಳಿಕ ಇವಿಎಂ ಯಂತ್ರಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್​ಗೆ ಬೆಂಕಿ ತಗುಲಿರುವ ಘಟನೆ ಮಧ್ಯಪ್ರದೇಶದ ಬೇತುಲ್​ನಲ್ಲಿ ನಡೆದಿದೆ.…

1 hour ago

ಮತ್ತಷ್ಟು ಮೇಲಕ್ಕೆ ಎರುತ್ತೀರಿ : ಶ್ರೀನಿಧಿ ಶೆಟ್ಟಿಗೆ ದೈವದ ಅಭಯ

ಕೆಜಿಎಪ್ ಸಿನಿಮಾದ ನಾಯಕಿ ಶ್ರೀನಿಧಿ ಶೆಟ್ಟಿಯವರು ತನ್ನ ಕುಟುಂಬದ ದೈವಗಳಿಗೆ ಹೇಳಿದ್ದ ಹರಕೆಯ ನೇಮೋತ್ಸವವನ್ನು ನೆರವೇರಿಸಿದರು. ಮಂಗಳೂರಿನ ಹೊರವಲಯದ ಕಿನ್ನಿಗೋಳಿ…

2 hours ago