News Karnataka Kannada
Tuesday, May 07 2024
ಬೆಂಗಳೂರು ನಗರ

ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ಬಿಡುಗಡೆಯಲ್ಲಿ ಏರುಪೇರು

Ksrtc Bus 07082021
Photo Credit :
ಬೆಂಗಳೂರು:  ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಅಕ್ಟೋಬರ್‌ ಬಂದರೂ ಆಗಸ್ಟ್‌ ತಿಂಗಳ ಬಾಕಿ ಶೇ.50ರಷ್ಟು ವೇತನ ಬಿಡುಗಡೆಯಾಗಿಲ್ಲ.

ಕೊರೋನಾ ಆರಂಭವಾದಾಗಿನಿಂದ ನೌಕರರ ವೇತನ ಬಿಡುಗಡೆಯಲ್ಲಿ ಏರುಪೇರಾಗುತ್ತಿದೆ. ಕಳೆದ ಒಂದು ವರ್ಷದಿಂದ ನಿಗದಿತ ದಿನಕ್ಕೆ ವೇತನ ಸಿಗುತ್ತಿಲ್ಲ. ಜುಲೈ ತಿಂಗಳ ವೇತನವನ್ನು ಆಗಸ್ಟ್‌ ಕೊನೆಯ ವಾರದಲ್ಲಿ ಪಾವತಿಸಲಾಗಿತ್ತು. ಆಗಸ್ಟ್‌ ತಿಂಗಳ ಶೇ.50ರಷ್ಟು ವೇತನವನ್ನು ಗೌರಿ-ಗಣೇಶ ಹಬ್ಬಕ್ಕೂ ಮುನ್ನ ಬಿಡುಗಡೆಗೊಳಿಸಲಾಗಿತ್ತು. ಈಗ ಅಕ್ಟೋಬರ್‌ ಬಂದರೂ ಆಗಸ್ಟ್‌ ತಿಂಗಳ ಬಾಕಿ ಶೇ.50ರಷ್ಟುವೇತನ ನೀಡಿಲ್ಲ. ಇದೀಗ ಮಹಾಲಯ ಅಮಾವಾಸ್ಯೆ, ದಸರಾ ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ನೌಕರರಿಗೆ ಹಣದ ಅಗತ್ಯವಿದೆ.

ಹೀಗಾಗಿ ಆಗಸ್ಟ್‌ ಬಾಕಿ ಹಾಗೂ ಸೆಪ್ಟೆಂಬರ್‌ ತಿಂಗಳ ವೇತನ ಸೇರಿದಂತೆ ಒಟ್ಟು ಒಂದೂವರೆ ತಿಂಗಳ ವೇತನವನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಸಾರಿಗೆ ನೌಕರರ ಮುಖಂಡ ಆನಂದ್‌ ಒತ್ತಾಯಿಸಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು