ಬೆಂಗಳೂರು : ಗುಜರಾತ್ ಮಾದರಿಯಲ್ಲಿ ರಾಜ್ಯದ ಪಠ್ಯದಲ್ಲೂ ಭಗವದ್ಗೀತೆ ಸೇರ್ಪಡೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಜೊತೆಗೆ ಚರ್ಚೆ ನಡೆಸಿ ನಿರ್ಧಾರ ಮಾಡುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಪಠ್ಯದಲ್ಲಿ ಈ ವರ್ಷ ಭಗವದ್ಗೀತೆ ಅಳವಡಿಕೆ ಮಾಡಲ್ಲ. ಆದರೆ ಮುಂದಿನ ದಿನಗಳಲ್ಲಿ ಮಾದರಿಯಲ್ಲಿ ರಾಜ್ಯದ ಪಠ್ಯದಲ್ಲೂ ಭಗವದ್ಗೀತೆ ಸೇರ್ಪಡೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಜೊತೆಗೆ ಚರ್ಚೆ ನಡೆಸಿ ನಿರ್ಧಾರ ಮಾಡುತ್ತೇವೆ ಎಂದರು.
ಗುಜರಾತ್ ಸರ್ಕಾರದ ನಿರ್ಧಾರ ಉತ್ತಮವಾಗಿ ಇದೆ. ಮಕ್ಕಳಿಗೆ ಮಾರಲ್ ಸೈನ್ಸ್ ವಿಷಯಗಳು ಬೋಧನೆ ಆಗುತ್ತಿಲ್ಲ. ಹೀಗಾಗಿ ಭಗವದ್ಗೀತೆ ಅಂಶಗಳನ್ನು ತಿಳಿಸುವುದು ಬಹಳ ಮುಖ್ಯ. ರಾಜ್ಯದ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ಬಗ್ಗೆ ಸಿಎಂ, ಶಿಕ್ಷಣ ತಜ್ಞರು, ಸಲಹಾ ಸಮಿತಿಗಳ ಜೊತೆ ಚರ್ಚೆ ಮಾಡಿ ಅಂತಿಮ ನಿರ್ಧಾರ ಮಾಡುತ್ತೇವೆ ಎಂದು ತಿಳಿಸಿದ್ದಾರೆ.