ಬೆಂಗಳೂರು : ರಾಜ್ಯದ ಮುಜುರಾಯಿ ವ್ಯಾಪ್ತಿಯ ದೇವಾಲಯಗಳನ್ನು ಖಾಸಗಿಯವರಿಗೆ ವಹಿಸಲಾಗುತ್ತದೆ ಎಂದು ಹೇಳಲಾಗುತ್ತಿತ್ತು. ಆದ್ರೇ ಈ ರೀತಿಯ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂಬುದಾಗಿ ಸಚಿವ ಶಶಿಕಲಾ ಜೊಲ್ಲೆ ಸ್ಪಷ್ಟ ಪಡಿಸಿದ್ದಾರೆ.
ಇಂದು ವಿಧಾನಸಭೆಯಲ್ಲಿ ಶಾಸಕ ಬಸನಗೌಡ ದದ್ದಲ್ ಅವರು ಕೇಳಿದಂತ ಪ್ರಶ್ನೆಗೆ ಸಚಿವೆ ಶಶಿಕಲಾ ಜೊಲ್ಲೆ ಪರವಾಗಿ ಉತ್ತರಿಸಿದಂತ ಆರ್ ಅಶೋಕ್ ಅವರು, ಮುಜುರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವಂತ ದೇವಾಲಗಳನ್ನು ಖಾಸಗಿಯವರಿಗೆ ಹಸ್ತಾಂತರ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಟ್ರಸ್ಟ್ ರಚನೆ ಮಾಡಲಾಗುತ್ತಿದೆ ಎಂದು ಹೇಳುವುದು ಸುಳ್ಳು ವದಂತಿ ಎಂಬುದಾಗಿ ಹೇಳಿದರು.
ಮುಜುರಾಯಿ ಇಲಾಖೆಗೆ ಸೇರಿದಂತೆ ಎ, ಬಿ ದರ್ಜೆಯ ದೇವಸ್ಥಾನಗಳಿಂದ ಸಾಕಷ್ಟು ಆದಾಯ ಬರುತ್ತಿದೆ. ಆ ಆದಾಯವನ್ನು ಬಳಸಿಕೊಂಡು ದೇವಾಲಯಗಳನ್ನು ಅಭಿವೃದ್ಧಿ ಪಡಿಸುವ ಕಾರ್ಯವನ್ನು ಮಾಡಲಾಗುವುದು ಎಂದು ತಿಳಿಸಿದರು.