ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕೊರೊನಾ: ನಾಳೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್  ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 9 ರಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಶಿಕ್ಷಣ ಹಾಗೂ ಆರೋಗ್ಯ ಇಲಾಖೆಯ ತಜ್ಞರು ಪಾಲ್ಗೊಳ್ಳಲಿದ್ದಾರೆ.ರಾಜ್ಯದ 130 ಶಾಲಾ ಮಕ್ಕಳಿಗೆ ಕೊರನಾ ಸೋಂಕು ದೃಢಪಟ್ಟಿದ್ದು, ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಪೋಷಕರಿಗೆ ಆತಂಕದ ಬೇಡ ಎಂದು ಹೇಳಿದ್ದಾರೆ.

ಶಾಲೆಗಳ ಕುರಿತು ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಯನ್ನು ಬದಲಾದ ಪರಿಸ್ಥಿತಿಗೆ ತಕ್ಕಂತೆ ಪರಿಷ್ಕರಣೆಮಾಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.ಇನ್ನು ಒಮಿಕ್ರಾನ್ ಅಪಾಯಕಾರಿ ಅಲ್ಲ ಎಂದು ತಜ್ಞರು ಹೇಳಿದ್ದಾರೆ. ಹೀಗಾಗಿ ಶಾಲೆ-ಕಾಲೇಜುಗಳನ್ನು ಮುಚ್ಚುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದರು.

Swathi MG

Recent Posts

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

1 min ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

7 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

20 mins ago

ತೃತೀಯ ಲಿಂಗಿಯ ಹತ್ಯೆ ಪ್ರಕರಣ: ಮಹಿಳೆಯ ಬಂಧನ

ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.

38 mins ago

ಬಿಗ್‌ಬಾಸ್‌ 16 ಸ್ಪರ್ಧಿ ʼಅಬ್ದು ರೋಝಿಕ್‌ʼಗೆ ಮದುವೆಯಂತೆ

ಬಿಗ್‌ಬಾಸ್‌ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್‌ ವಿಡಿಯೋವೊಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…

49 mins ago

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

1 hour ago