News Karnataka Kannada
Thursday, May 16 2024
ಬೆಂಗಳೂರು ನಗರ

ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಕನಿಷ್ಠ ದರದಲ್ಲಿ ಗುಣಮಟ್ಟದ ಔಷಧ ದೊರಕಬೇಕು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Photo Credit :

ಬೆಂಗಳೂರು: ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಕನಿಷ್ಠ ದರದಲ್ಲಿ ಗುಣಮಟ್ಟದ ಔಷಧ ದೊರಕಬೇಕು. ಈ ನಿಟ್ಟಿನಲ್ಲಿ ಔಷಧ ವಿತರಣೆಯ ವಿಕೇಂದ್ರೀಕರಣವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಸರಕಾರಿ ಔಷಧ ಮಳಿಗೆಗಳು ಸ್ಥಳೀಯ ಮಟ್ಟದಲ್ಲಿಯೇ ಇದ್ದು, ಅಗತ್ಯ ಔಷಧಗಳನ್ನು ಹೊಂದಿರಬೇಕು. ದಾಸ್ತಾನು ಹಾಗೂ ಲೆಕ್ಕಪತ್ರಗಳೆಲ್ಲವೂ ಡಿಜಿಟಲೀಕರಣವಾಗಬೇಕು. ಅನಗತ್ಯ ಔಷಧಗಳನ್ನು ಕೊಳ್ಳದೇ ಔಷಧಗಳ ಗುಣಮಟ್ಟವನ್ನು ಖಾತ್ರಿಪಡಿಸಿಕೊಳ್ಳಬೇಕು. ಇತರೆ ರಾಜ್ಯಗಳಲ್ಲಿ ಔಷಧಗಳ ದರ ಪರಿಶೀಲಿಸಿ ನೇರವಾಗಿ ಔಷಧ ಉತ್ಪಾದಕರೊಂದಿಗೆ ಮಾತುಕತೆ ನಡೆಸುವಂತೆ ಸಿಎಂ ಬೊಮ್ಮಾಯಿ ಸೂಚಿಸಿದರು.

ತಾಯಿ ಮಕ್ಕಳ ಪೌಷ್ಟಿಕ ಮಟ್ಟ ಸುಧಾರಣೆಗೆ ಕ್ರಮ
ತಾಯಂದಿರ ಹಾಗೂ ಮಕ್ಕಳ ಆರೋಗ್ಯ ಕಾಪಾಡಲು ಸಮಗ್ರ ಪೌಷ್ಟಿಕ ಯೋಜನೆಯನ್ನು ರೂಪಿಸಬೇಕು. ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಈ ಬಗ್ಗೆ ಹೆಚ್ಚಿನ ಗಮನಹರಿಸಿ, ತಾಯಂದಿರ ಮತ್ತು ಮಕ್ಕಳ ಪೌಷ್ಟಿಕ ಮಟ್ಟವನ್ನು ಸುಧಾರಿಸಲು ಅಗತ್ಯವಿರುವ ಅನುದಾನ ಪಡೆದು ಹಾಗೂ ಶ್ರಮವಹಿಸಿ, ಮುಂದಿನ ಒಂದು ವರ್ಷದಲ್ಲಿ ಈ ನಿಟ್ಟಿನಲ್ಲಿ ಮಹತ್ತರ ಬದಲಾವಣೆಯನ್ನು ತರಬೇಕೆಂದು ಸಿಎಂ ಸೂಚಿಸಿದರು.

ಅಗತ್ಯವಿರುವ ಜಿಲ್ಲೆಗಳಲ್ಲಿ ಮಾತ್ರ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುವಂತೆ ಸೂಚಿಸಿದ ಮುಖ್ಯಮಂತ್ರಿಗಳು ಜಿಲ್ಲಾ ಮಟ್ಟದಲ್ಲಿ ಡಯಾಲಿಸಿಸ್ ಕೇಂದ್ರಗಳನ್ನು ಪಿಪಿಪಿ ಮಾದರಿಯಲ್ಲಿ ಸ್ಥಾಪಿಸಲು ಕ್ರಮ ವಹಿಸಲು ತಿಳಿಸಿದರು.

ವೈದ್ಯಕೀಯ ಶಿಕ್ಷಣ
ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಕಡ್ಡಾಯವಾಗಿ ಒಂದು ಇಂಟರ್ನ್‍ಶಿಪ್ ಕೈಗೊಳ್ಳುವಂತೆ ರಾಷ್ಟ್ರೀಯ ವೈದ್ಯಕೀಯ ಮಂಡಳಿಗೆ ಪತ್ರ ಬರೆಯುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಜಿಲ್ಲಾ ಆರೋಗ್ಯಾಧಿಕಾರಿಗಳನ್ನು ಆಸ್ಪತ್ರೆಯ ಆಡಳಿತಾತ್ಮಕ ಜವಾಬ್ದಾರಿಯಿಂದ ಮುಕ್ತಗೊಳಿಸಿ ಆಸ್ಪತ್ರೆಗಳ ಆಡಳಿತ ನಿರ್ವಹಣೆಗೆ ಕೆ.ಎ.ಎಸ್. ಅಧಿಕಾರಿಗಳನ್ನು ನೇಮಿಸಬೇಕು. ಚಿತ್ರದುರ್ಗದಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಸರಕಾರಿ ಆದೇಶ ಹೊರಡಿಸಿ ಮೊದಲನೇ ಮತ್ತು 2 ನೇ ವರ್ಷಕ್ಕೆ ಅಗತ್ಯವಿರುವ ಮೂಲಭೂತಸೌಲಭ್ಯಗಳನ್ನು ನಿರ್ಮಿಸಿ, ಹಂತ ಹಂತವಾಗಿ ಸೌಲಭ್ಯಗಳನ್ನು ವಿಸ್ತರಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹಾಗೂ ಸರಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು