ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ಇಂದು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು ಮತ್ತು ಹಾಸನ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದ ಉತ್ತರ ಒಳನಾಡಿನಲ್ಲಿ ಮಳೆಯಾಗುವುದಿಲ್ಲ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಕರ್ನಾಟಕದ ಕರಾವಳಿ, ಬೆಂಗಳೂರು, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಚಳಿಯೂ ಹೆಚ್ಚಾಗಿದೆ.