ಬೆಂಗಳೂರು: ಇಂದು ಮತ್ತು ನಾಳೆ ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಏ.11ರವರೆಗೂ ಮಳೆ ಮುಂದುವರೆಯಲಿದ್ದು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಹಾಸನ, ದಾವಣಗೆರೆ, ಬೆಂಗಳೂರು, ಮೈಸೂರು, ಕೊಡಗು ಮುಂತಾದ ಕಡೆ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇದೇ ವೇಳೆ ಕೇರಳ, ತಮಿಳುನಾಡು, ಕರ್ನಾಟಕ ಮತ್ತು ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹೇಳಿದೆ.
ತಮಿಳುನಾಡಿನ ಕರಾವಳಿಯಲ್ಲಿ ಮೇಲೆ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಗುಡುಗು ಸಹಿತ ಮಳೆಯಾಗುತ್ತಿದ್ದು, ಇಂದಿನಿಂದ 10ರವರೆಗೆ ಮಳೆ ಮುಂದುವರೆಯಲಿದೆ. ರಾಜ್ಯದ ಕರಾವಳಿ ಮಾತ್ರವಲ್ಲದೆ ಬೆಂಗಳೂರು, ಚಾಮರಾಜನಗರ, ಮೈಸೂರು, ಹಾಸನ, ಮಂಡ್ಯ, ರಾಮನಗರ, ಕೊಡು ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಕೂಡ ಇಂದು ಮಳೆಯಾಗುವ ಸಾಧ್ಯತೆ ಇದೆ.