ಬೆಂಗಳೂರು: ಅಸಾನಿ ಚಂಡಮಾರುತದ ಪರಿಣಾಮದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಐದು ದಿನ ಅಕಾಲಿಕ ಮಳೆ, ಗುಡುಗು ಆರ್ಭಟಿಸಲಿದೆ. ಈ ಹಿನ್ನಲೆಯಲ್ಲಿ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಹೈ ಅಲರ್ಟ್ ಕೂಡ ಹವಾಮಾನ ಇಲಾಖೆ ಘೋಷಣೆ ಮಾಡಿದೆ.
ಮಾರ್ಚ್ 21 ರಿಂದ 24ರವರೆಗೆ ಕರಾವಳಿ ಜಿಲ್ಲೆಗಳಾದಂತ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.ಮಾರ್ಚ್ 24 ಮತ್ತು 25ರಂದು ಗದಗ, ಹಾವೇರಿ, ಧಾರವಾಡ, ಬೆಳಗಾವಿ, ರಾಯಚೂರು ಜಿಲ್ಲೆಗಳಲ್ಲಿ ಮಳೆ ಬೀಳಲಿದೆ. ಮಾರ್ಚ್ 22 ಮತ್ತು 23ರಂದು ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವಂತ ಹವಾಮಾನ ಇಲಾಖೆಯೂ, ಆಗ್ನೇಯ ಬಂಗಾಗಳಕೊಲ್ಲಿ ಹಾಗೂ ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಪ್ರಬಲ ವಾಯುಭಾರ ಕುಸಿತದ ಕಾರಣದಿಂದಾಗಿ, ರಾಜ್ಯಾಧ್ಯಂತ ಗುಡುಗು, ಸಿಡಿಲಿನೊಂದಿಗೆ ಮಳೆಯಾಗಲಿದ್ದು, ಇನ್ನೂ ಐದು ದಿನ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಿದೆ.ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಕೊಪ್ಪಳ, ಬಾಗಲಕೋಟೆ, ಗದಗ, ರಾಯಚೂರು ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಾರ್ಚ್ 21ರಂದು ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದಂತ ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಮಂಡ್ಯ, ಕೊಡಗು, ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಾರ್ಚ್ 21 ರಿಂದ 25ರವರೆಗೆ ಮಳೆಯಾಗುವ ಸಾಧ್ಯತೆ ಇದೆ.
ಇನ್ನೂ ಚಿತ್ರದುರ್ಗ, ಬಳ್ಳಾರಿ ಮತ್ತು ದಾವಣಗೆರೆಯಲ್ಲಿ ಮಾರ್ಚ್ 21 ರಿಂದ 25ರವರೆಗೆ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.