ಬೆಂಗಳೂರು :ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿಎರಡು ದಿನಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ .
ಬೀದರ್, ಕಲಬುರ್ಗಿ, ರಾಯಚೂರು, ಹಾವೇರಿ, ಬೆಳಗಾವಿ, ಯಾದಗಿರಿ, ವಿಜಯಪುರ, ಧಾರವಾಡದಲ್ಲಿ ಇಂದು ಮತ್ತು ನಾಳೆ ಒಣಹವೆ ಮುಂದುವರೆಯಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ, ಕೋಲಾರ, ಹಾಸನ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆಯಾಗಲಿದೆ , ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.