ಬೆಂಗಳೂರು: ಮುಂಗಾರು ದುರ್ಬಲಗೊಂಡಿರುವ ನಡುವೆಯೇ ರಾಜ್ಯದ ಹಲವೆಡೆಗಳಲ್ಲಿ ಮಳೆಯಾಗುತ್ತಿದೆ. ಜೂ.6ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯಂತೆ ಕಾಸರಗೋಡು ಸೇರಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆ, ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ, ಗುಡುಗು ಸಹಿತ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಇನ್ನು ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಪಾವಗಢ, ತುಮಕೂರು, ಬೆಂಗಳೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ, ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ, ಬಾಗಲಕೋಟೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಕೂಡಾ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಕವಿದ ವಾತಾವರಣ, ತುಂತುರು ಮಳೆಯ ಮುನ್ಸೂಚನೆ ಇದೆ.