News Karnataka Kannada
Monday, May 06 2024
ಬೆಂಗಳೂರು ನಗರ

ರಾಜ್ಯದ 200 ಮಂದಿಗೆ ಉಚಿತ ಕೆಎಎಸ್ ತರಬೇತಿ

Inauguration of administrative office of Federation of Bunts Associations at Mulki on April 5
Photo Credit :

ಬೆಂಗಳೂರು: ರಾಜ್ಯದ 200 ಮಂದಿ ಅಭ್ಯರ್ಥಿಗಳಿಗೆ ಕೆ.ಎ.ಎಸ್ ಉಚಿತ ತರಬೇತಿ ನೀಡಲು ಕೋಲಾರದಲ್ಲಿನ ವಿವೇಕ್ ಇನ್ಫೋಟೆಕ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಿಂದ ಆಸಕ್ತ ಸ್ಪರ್ಧಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶ ಪರೀಕ್ಷೆಯನ್ನು ನೀಡಿ ನಂತರ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಈಗಾಗಲೇ ಸಾಕಷ್ಟು ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸುತ್ತಿದ್ದು ಆಸಕ್ತರು ಫೆ.25 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿಗಳನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾ.06 ರಂದು ಪ್ರವೇಶ ಪರೀಕ್ಷೆಯನ್ನು ಏಕಕಾಲಕ್ಕೆ ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ನಡೆಸಲಾಗುವುದು. ಆಫ್‌ಲೈನ್ ಪರೀಕ್ಷೆಯನ್ನು ಕೋಲಾರ ನಗರದ ಅಂತರಗಂಗೆ ರಸ್ತೆಯಲ್ಲಿರುವ ವಿವೇಕ್‌ಇನ್ಫೋಟೆಕ್ ಸಂಸ್ಥೆಯಲ್ಲಿ ನಡೆಸಲಾಗುತ್ತದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ 100 ಮಂದಿಯಂತೆ ಎರಡು ಬ್ಯಾಚ್‌ಗಳ ಮೂಲಕ ತರಬೇತಿ ನೀಡಲಾಗುತ್ತದೆ. ಮೊದಲ ಬ್ಯಾಚ್ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಾಗೂ ಎರಡನೇ ಬ್ಯಾಚ್ 2 ಗಂಟೆಯಿಂದ 6 ಗಂಟೆಯವರೆಗೆ ನಡೆಯಲಿದೆ. ಅಭ್ಯರ್ಥಿಗಳಿಗೆ 3 ರಿಂದ 4 ತಿಂಗಳವರೆಗೆ ಕೆ.ಎ.ಎಸ್ ತರಬೇತಿಯನ್ನು ನೀಡಲಾಗುತ್ತದೆ. ಹೊರ ಜಿಲ್ಲೆಗಳಿಂದ ಹಾಗೂ ದೂರದ ಗ್ರಾಮಗಳಿಂದ ತರಬೇತಿಗೆ ಬರುವವರಿಗೆ ಪಿ.ಜಿ. ವ್ಯವಸ್ಥೆ ಇರುತ್ತದೆ.

ತರಬೇತಿಯು ಮಾರ್ಚ್ 15 ರಿಂದ ಪ್ರಾರಂಭಗೊಳ್ಳಲಿದ್ದು ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಯಲ್ಲಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲಾಗುವುದು. ಆಸಕ್ತರು ಈ ಕುರಿತು ಹೆಚ್ಚಿನ ಮಾಹಿತಿಗಾಗಿ 9880791025, 9731163835 ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎ. ಪ್ರಮೋದ್ ಕುಮಾರ್ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು