ರಾಜ್ಯದ 58 ನಗರ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಗೆ ಮುಹೂರ್ತ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣಾ ವೇಳಪಟ್ಟಿ ಪ್ರಕಟಿಸಿದೆ. ಅಲ್ಲದೇ 9 ನಗರ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಕಾರಣಾಂತರಗಳಿಂದ ತೆರವಾದ ಸ್ಥಾನಗಳಿಗೆ ಉಪಚುನಾವಣೆಯನ್ನೂ ಘೋಷಿಸಲಾಗಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದೆ.

ಚುನಾವಣಾ ಆಯೋಗ ಇಂದು ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದು, ಐದು ನಗರಸಭೆ, 19 ಪುರಸಭೆ ಹಾಗೂ ಪಟ್ಟಣ ಪಂಚಾಯತ್‌ಗಳ 1185 ವಾರ್ಡ್‌ಗಳಿಗೆ ಚುನಾವಣೆ ಜರಗಲಿದೆ. ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಡಿ. 8ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದಾರೆ. ಅಂದಿನಿಂದಲೇ ಚುನಾವಣೆ ನಡೆಯುವ ನಗರ ಸ್ಥಳೀಯಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರಲಿದೆ.

ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಡಿ. 8ರಿಂದ ಆರಂಭವಾಗಲಿದೆ. ನಾಮಪತ್ರ ಸಲ್ಲಿಕೆಗೆ ಡಿ. 15 ಕೊನೆಯ ದಿನವಾಗಿದ್ದು, 16ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಡಿ. 18ರವರೆಗೆ ಅವಕಾಶವಿದೆ. ಡಿ. 27ರಂದು ಬೆಳಗ್ಗೆ 7ರಿಂದ 5ಗಂಟೆಯವರೆಗೆ ಮತದಾನ ನಡೆಯಲಿದೆ. ಮರುಮತದಾನದ ಅಗತ್ಯಬಿದ್ದರೆ ಡಿ. 29ರಂದು ನಡೆಸಲಾಗುತ್ತದೆ. ಮತ ಎಣಿಕೆ 31ರಂದು ಬೆಳಗ್ಗೆ 8ಗಂಟೆಯಿಂದ ಆಯಾ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ.

ಮಹಾನಗರ ಪಾಲಿಕೆಗೆ ₹ 3ಲಕ್ಷ, ನಗರಸಭೆಗೆ ₹ 2ಲಕ್ಷ, ಪುರಸಭೆಗೆ ₹ 1.5ಲಕ್ಷ ಮತ್ತು ಪಟ್ಟಣ ಪಂಚಾಯತ್‌ಗೆ ₹ 1ಲಕ್ಷ ಚುನಾವಣಾ ವೆಚ್ಚದ ಗರಿಷ್ಠ ಮಿತಿಯನ್ನು ನಿಗದಿಪಡಿಸಲಾಗಿದೆ. ಮತಪತ್ರಗಳಲ್ಲಿ ಅಭ್ಯರ್ಥಿಯ ಹೆಸರಿನ ಮುಂದೆ ಅವರ ಭಾವಚಿತ್ರವನ್ನು ಮುದ್ರಿಸಲಾಗುತ್ತದೆ. ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಚುನಾವಣೆಯ ಎಲ್ಲ ಹಂತದಲ್ಲೂ ಸಾಮಾಜಿಕ ಅಂತರ ಕಾಯ್ದುಕೊಂಡು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಚುನಾವಣಾ ಆಯೋಗ ಸೂಚಿಸಿದೆ.

Sneha Gowda

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

5 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

5 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

6 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

6 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

6 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

7 hours ago