ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಗೆ ಚುನಾವಣೆ ದಿನಾಂಕ ಘೋಷಣೆ

ಬೆಂಗಳೂರು, (ನ.29): ಸದ್ಯ ರಾಜ್ಯದಲ್ಲಿ ವಿಧಾನಪರಿಷತ್‌ ಚುನಾವಣೆ ಕಾವು ರಂಗೇರಿದೆ. ಇದರ ಮಧ್ಯೆ ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಗೆ ಚುನಾವಣೆ ದಿನಾಂಕ ಘೋಷಣೆಯಾಗಿದೆ.

ಅವಧಿ ಮುಕ್ತಾಯಗೊಂಡ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ  ದಿನಾಂಕವನ್ನು ರಾಜ್ಯ ಆಯೋಗ ಚುನಾವಣೆ  ಘೋಷಣೆ ಮಾಡಿದೆ.

4 ನಗರಸಭೆ, 19 ಪುರಸಭೆ, 35 ಪ.ಪಂ.ಗೆ ಡಿ. 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಫಲಿತಾಂಶ ಹೊರಬೀಳಲಿದೆ.

ಡಿಸೆಂಬರ್ 27ರಂದು ಚಿಕ್ಕಮಗಳೂರು, ಶಿರಾ, ಗದಗ-ಬೆಟಗೇರಿ, ಹೊಸಪೇಟೆ-ಹೆಬ್ಬಗೋಡಿ ನಗರಸಭೆಗಳಿಗೆ ಮತದಾನ ನಡೆಯಲಿದೆ. 5 ನಗರಸಭೆ, 3 ಪುರಸಭೆ, 1 ಪಟ್ಟಣ ಪಂಚಾಯಿತಿಯಲ್ಲಿ ತೆರವಾಗಿರುವ ಸ್ಥಾನಗಳಿಗೂ ಡಿಸೆಂಬರ್ 27ರಂದು ಚುನಾವಣೆ ನಡೆಯಲಿದೆ. ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ತೆರವಾಗಿರುವ 386 ಸ್ಥಾನಗಳಿಗೂ ಉಪಚುನಾವಣೆ ನಡೆಯಲಿದೆ. ಡಿಸೆಂಬರ್ 13 ರಿಂದ ನೀತಿಸಂಹಿತೆ ಜಾರಿಯಾಗಲಿದೆ.

ಕೋವಿಡ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ನಿಯಮಾವಳಿಗಳನ್ನು ಪಾಲನೆ ಮಾಡಿ ಚುನಾವಣೆ ಪ್ರಕ್ರಿಯೆ ನಡೆಸುವಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ.

ಡಿಸೆಂಬರ್ 27ರಂದು ಅಥಣಿ, ಅಣ್ಣಿಗೇರಿ, ಬಂಕಾಪುರ, ಜಿಗಣಿ, ಚಂದಾಪುರ, ಬಿಡದಿ, ಮಲೆಬೆನ್ನೂರು, ಕಾಪು, ಹಾರೋಗೇರಿ, ಮುಗಳಖೋಡ, ಮುನವಳ್ಳಿ, ಉಗಾರಖುರ್ದ, ಕಾರಟಗಿ, ಕುರೆಕುಪ್ಪ, ಕುರುಗೋಡು, ಹಗರಿಬೊಮ್ಮನಹಳ್ಳಿ, ಮಸ್ಕಿ, ಕೆಂಭಾವಿ, ಕಕ್ಕೇರಾ ಪುರಸಭೆಗಳಿಗೆ ಮತದಾನ ನಡೆಯಲಿದೆ. ಡಿ. 27ರಂದು 35 ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ.

ಅವು ನಾಯಕನಹಟ್ಟಿ, ವಿಟ್ಲ, ಕೋಟೆಕಾರು, ಎಂ.ಕೆ.ಹುಬ್ಬಳ್ಳಿ, ಕಂಕನವಾಡಿ, ನಾಗನೂರ, ಯಕ್ಸಾಂಬಾ, ಕಿತ್ತೂರು, ಅರಭಾವಿ, ಐನಾಪುರ, ಶೇಡಬಾಳ, ಚಿಂಚಿಲಿ, ಬೋರಗಾಂವ್, ಕಲ್ಲೋಳಿ, ನಲತವಾಡ, ನಿಡಗುಂದಿ, ದೇವರಹಿಪ್ಪರಗಿ, ಅಲಮೇಲ, ಮನಗೂಳಿ, ಕೊಲ್ಹಾರ, ಕಮತಗಿ, ಬೆಳಗಲಿ, ಅಮೀನಗಡ, ಗುತ್ತಲ, ಜಾಲಿ, ತಾವರಗೇರಾ, ಕುಕನೂರ, ಭಾಗ್ಯನಗರ, ಕನಕಗಿರಿ, ಮರಿಯಮ್ಮನಹಳ್ಳಿ, ಕವಿತಾಳ, ತುರವಿಹಾಳ, ಬಳಗಾನೂರು, ಸಿರವಾರ ಪಟ್ಟಣ ಪಂಚಾಯಿತಿಗೆ ಮತದಾನ ನಡೆಯಲಿದೆ.

ಸ್ಥಳೀಯ ಸಂಸ್ಥೆ ಚುನಾವಣೆ ದಿನಾಂಕ
ಡಿಸೆಂಬರ್ 13 ಚುನಾವಣಾ ಅಧಿಸೂಚನೆ
ಡಿಸೆಂಬರ್ 17 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ
ಡಿಸೆಂಬರ್ 27 ಮತದಾನ
ಡಿಸೆಂಬರ್ 30 ಫಲಿತಾಂಶ

ವಿಧಾನ ಪರಿಷತ್ ಚುನಾವಣೆ ದಿನಾಂಕ
ರಾಜ್ಯ ಮೇಲ್ಮನೆಯ 25 ಸ್ಥಾನಗಳಿಗೆ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದ್ದು ಡಿಸೆಂಬರ್ 14ರಂದು ಫಲಿತಾಂಶ ಪ್ರಕಟವಾಗಿಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಉತ್ತರ ಕನ್ನಡ, ಧಾರವಾಡ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಮಂಡ್ಯ, ಕೋಲಾರ, ಕೊಡಗು ಮತ್ತು ಮೈಸೂರು ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರಗಳಿಂದ ಚುನಾವಣೆ ನಡೆಯಲಿದೆ.

Gayathri SG

Recent Posts

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

26 mins ago

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

43 mins ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

1 hour ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

2 hours ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

2 hours ago

ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ; ಶಾಸಕರ ಭೇಟಿ, ತಕ್ಷಣ ವ್ಯವಸ್ಥೆ ಮಾಡುವಂತೆ ಸೂಚನೆ

ಭಾನುವಾರ ಸಂಜೆ ಪುತಯ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ…

2 hours ago