News Karnataka Kannada
Monday, April 29 2024
ಬೆಂಗಳೂರು ನಗರ

ರಾಜ್ಯಸಭೆಗೆ ಕರ್ನಾಟಕದಿಂದ ಸ್ಪರ್ಧಿಸಿರುವ 3 ಅಭ್ಯರ್ಥಿಗಳು ಗೆಲ್ಲಲಿದ್ದಾರೆ!

Arun Singh
Photo Credit : Twitter

ಬೆಂಗಳೂರು: ರಾಜ್ಯಸಭೆಗೆ ಕರ್ನಾಟಕದಿಂದ ಸ್ಪರ್ಧಿಸಿರುವ ಮೂರೂ ಅಭ್ಯರ್ಥಿಗಳು ವಿಜೇತರಾಗಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರಿನ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರವು ಕರ್ನಾಟಕದ ಅಭಿವೃದ್ಧಿಗೆ ವಿಶೇಷ ಆದ್ಯತೆ ಕೊಟ್ಟಿದೆ. ಕೇಂದ್ರದ ಬಿಜೆಪಿ ಸರ್ಕಾರ ಮತ್ತು ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಮಾಡಿದ ಉತ್ತಮ ಕಾರ್ಯಗಳನ್ನು ಗಮನದಲ್ಲಿಟ್ಟುಕೊಂಡು ಶಾಸಕರು ಬಿಜೆಪಿ ಪರವಾಗಿ ಮತ ಚಲಾಯಿಸಲಿದ್ದಾರೆ ಎಂದು ಹೇಳಿದರು.

ಪ್ರಧಾನಿಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ 8 ವರ್ಷಗಳನ್ನು ಪೂರೈಸಿದೆ. ಈ ಹಿನ್ನೆಲೆ ಬಿಜೆಪಿ ವತಿಯಿಂದ 15 ದಿನಗಳ ಕಾಲ ಮೋದಿಯವರ ಸಾಧನೆಯನ್ನು ಜನರಿಗೆ ತಿಳಿಸುವ ಅಭಿಯಾನವನ್ನು ನಡೆಸಲಾಗುತ್ತಿದೆ. ಪ್ರತಿ ಗ್ರಾಮದ ಪ್ರತಿಯೊಂದು ಮನೆಯನ್ನು ಸಂಪರ್ಕಿಸಿ ಸಾಧನೆಯನ್ನು ತಿಳಿಸುವ ಕಾರ್ಯ ನಡೆಯುತ್ತಿದೆ. ಇದರ ಜೊತೆಗೆ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರದ ಸಾಧನೆಗಳು ಮತ್ತು ಯೋಜನೆಗಳ ಕುರಿತಾದ ಮಾಹಿತಿಗಳನ್ನು ಜನರಿಗೆ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು