ಬೆಂಗಳೂರು ನಗರ

ರಾಜ್ಯಾದ್ಯಂತ ಮೇ 16ರಿಂದ ಶೈಕ್ಷಣಿಕ ವರ್ಷಾರಂಭ

ಬೆಂಗಳೂರು:  ಮೇ 16ರಿಂದ ರಾಜ್ಯಾದ್ಯಂತ  ಶೈಕ್ಷಣಿಕ ವರ್ಷಾರಂಭ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಅವರು ಬುಧವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಈ ಬಗ್ಗೆ ಮಾಹಿತಿ ನೀಡಿದರು.ಇದೇ ವೇಳೆ ಅವರು ಮಾತನಾಡಿ, ಕೋವಿಡ್ ಕಾರಣದಿಂದಾಗಿ ನಮ್ಮ ಮಕ್ಕಳ ಕಲಿಕ ಮಟ್ಟ, ಆ ತರಗತಿಯ ಮಟ್ಟಕ್ಕೆ ಇಲ್ಲ ಎನ್ನುವುದು ನಮ್ಮ ಸರ್ವೆಗಳಲ್ಲಿ, ಕೇಂದ್ರ ಸೇರಿದಂತೆ ಎನ್‌ಜಿಓ ನಡೆಸಿದ ಸರ್ವೆಗಳಲ್ಲಿ ಕಂಡು ಬಂದಿದೆ.

ಈ ಬಗ್ಗೆ ಕೇಂದ್ರ ಸರ್ಕಾರ ಸೂಚನೆ ನೀಡಿರುವ ಹಿನ್ನಲೆಯಲ್ಲಿ, ರಾಜ್ಯದ ಎಲ್ಲಾ ಅಧಿಕಾರಿಗಳು ಸಭೆ ನಡೆಸಿ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, 2022-23ನೇ ಶೈಕ್ಷಣಿಕ ಸಾಲಿನಲ್ಲಿ 1-9 ನೇ ತರಗತಿಯ ವಿದ್ಯಾರ್ಥಿಗಳಿಗೆ ಕಲಿಕಾ ಚೇತರಿಕೆ ಕಾರ್ಯಕ್ರಮ ನಡೆಯಲಿದೆ.

ಈ ಬಾರಿ 15 ದಿನಗಳ ರಜೆಯನ್ನು ಕಡಿತ ಮಾಡಿದ್ದು, ಈ ನಿಟ್ಟಿನಲ್ಲಿ ಎಲ್ಲಾ ಶಿಕ್ಷಕರು, ಪ್ರತಿನಿಧಿಗಳ ಸಹಕಾರ ಸಿಕ್ಕಿದೆ. ಮುಂದಿನ ಶೈಕ್ಷಣಿಕ ಸಾಲು ಮೇ 16 ರಿಂದ ಶಾಲೆಗಳು ಪ್ರಾರಂಭವಾಗಲಿದ್ದು, ಆ ದಿನಗಳು ಕಲಿಕಾ ಚೇತರಿಕೆಯನ್ನು ನಡೆಸಲಿದ್ದು, ಅದ ಬಳಿಕ ಪ್ರತಿ ದಿನ ನಡೆಸಲಾಗುವುದು, ಇದಲ್ಲದೇ ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳ ಕಲಿಕ ಮಟ್ಟವನ್ನು ಹೆಚ್ಚಗಲಿದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.

Swathi MG

Recent Posts

‘ಜಂಟಿ ಸರ್ವೆ ಆಗುವ ತನಕ ಹಿರೀಕಾಟಿಯಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸದಿದ್ದರೆ ಉಗ್ರ ಹೋರಾಟ’

ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದ ಸರ್ವೆ ನಂ. 108 ರಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಸೇರಿದ 2 ಎಕರೆ…

3 mins ago

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಕೆಲಸದ ವಿಚಾರವಾಗಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

10 mins ago

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

17 mins ago

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

29 mins ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

34 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

49 mins ago