ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾಜ ಕಲ್ಯಾಣ ಇಲಾಖೆ ಡಾ. ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಆಯೋಜಿಸಿದ್ದ ರಾಜ್ಯ ಮಟ್ಟದ ಚರ್ಮ ಕುಶಲಕರ್ಮಿಗಳ ಸಮಾವೇಶ ಹಾಗೂ ಚರ್ಮ ಕರಕುಶಲ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ನಗಾರಿ ಬಾರಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಸಚಿವ ಎ ನಾರಾಯಣಸ್ವಾಮಿ, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಲ ಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಉನ್ನತ ಶಿಕ್ಷಣ ಸಚಿವ ಡಾ. ಸಿಎನ್ ಅಶ್ವತ್ಥ ನಾರಾಯಣ, ಡಾ.ಬಾಬು ಜಗಜೀವನ್ ರಾಂ ಅಭಿವೃದ್ಧಿ ನಿಗಮದ ಅಧ್ಯಕ್ಷ ಲಿಂಗಣ್ಣ, ಸಂಸದ ಪಿ ಸಿ ಮೋಹನ್, ಶಾಸಕ ರಮೇಶಗೌಡ,ಎಂ ಸಿ ಆಂಡ ಎ ಸಂಸ್ಥೆ ಅಧ್ಯಕ್ಷ ಮುನಿಕೃಷ್ಣ ಮತ್ತು ಇತರರು ಉಪಸ್ಥಿತರಿದ್ದರು.