ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ ರವಿಕುಮಾರ್ ಅವರ ವಯೋ ನಿವೃತ್ತಿಯಿಂದ ಇದೇ ಮೇ 31 ರಂದು ತೆರವಾಗಲಿರುವ ಹುದ್ದೆಗೆ ಕರ್ನಾಟಕ ವೃಂದದ ಭಾರತೀಯ ಆಡಳಿತ ಸೇವೆಯ 1986 ನೇ ಸಾಲಿನ ತಂಡದ ವಂದಿತಾ ಶರ್ಮಾ ಉತ್ತರಾಧಿಕಾರಿಯಾಗಲಿದ್ದಾರೆ.

ವಂದಿತಾ ಶರ್ಮಾ ಅವರು ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುತ್ತಿರುವ ನಾಲ್ಕನೇ ಮಹಿಳೆಯಾಗಿದ್ದಾರೆ.

ಮಹಿಳೆಯರ ದರ್ಬಾರ್ !

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಈ ಹಿಂದೆ 2000 ನೇ ಇಸವಿಯಲ್ಲಿ ತೆರೇಸಾ ಭಟ್ಟಾಚಾರ್ಯ, 2006 ನೇ ಇಸವಿಯಲ್ಲಿ ಮಾಲತಿ ದಾಸ್ ಹಾಗೂ 2017 ನೇ ಇಸವಿಯಲ್ಲಿ ಕೆ. ರತ್ನ ಪ್ರಭ ಅವರೂ ಅಲಂಕರಿಸಿದ್ದರು.

ಕೆ ರತ್ನ ಪ್ರಭ ಅವರ ಅಧಿಕಾರಾವಧಿಯಲ್ಲಿ ರಾಜ್ಯ ಪೋಲಿಸ್ ಮಹಾನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಹುದ್ದೆಯನ್ನು ನೀಲಮಣಿ ಎನ್ ರಾಜು ಅಲಂಕರಿಸಿದಾಗ ಎರಡು ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರೇ ಇದ್ದಾರೆ ಎಂಬುದು ಗಮನಾರ್ಹ ಅಂಶವಾಗಿತ್ತು.

ಇದೀಗ ವಂದಿತಾ ಶರ್ಮಾ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದೊಡನೆಯೇ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಇರುವ ಮೂರೂ ಪ್ರಮುಖ ಹುದ್ದೆಗಳನ್ನು ಮಹಿಳೆಯರೇ ಅಲಂಕರಿಸಿದಂತಾಗುತ್ತದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಹಾಗೂ ರಾಜ್ಯ ವಿಧಾನ ಪರಿಷತ್ ಕಾರ್ಯದರ್ಶಿ ಕೆ ಆರ್ ಮಹಾಲಕ್ಷ್ಮಿ ಶಕ್ತಿ ಕೇಂದ್ರದ ಶಕ್ತಿಯಾಗಿ ಹೊಸ ದಾಖಲೆ ಸ್ಥಾಪಿಸಲಿದ್ದಾರೆ.

Gayathri SG

Recent Posts

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

28 seconds ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

24 mins ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

44 mins ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

44 mins ago

ಜೀವ -ಜಲ ಉಳಿಸಲು ಸ್ವಯಂ ಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ: ಪ್ರಭಾಕರ ಶರ್ಮಾ

ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು  ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…

46 mins ago

ತಲೆ ಮೇಲೆ ಇಟ್ಟಿಗೆ ಎತ್ತಿ ಹಾಕಿ ಗೆಳೆಯನಿಂದಲೇ ಕೊಲೆ

ಮದ್ಯ ಸೇವನೆಗೆಂದು ಕರೆದೊಯ್ದು ಕೊಲೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

59 mins ago