ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ-2022ನ್ನು ಮೇ 30, 31 ಹಾಗೂ ಜೂನ್ 1 ರಂದು ನಗರದ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ಅವರು ತಿಳಿಸಿದರು.

ಪ್ರೆಸ್ಕ್ಲಬ್ನಲ್ಲಿ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಕುರಿತು ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು,  ಕ್ರೀಡಾಕೂಟದಲ್ಲಿ 10 ಸಾವಿರಕ್ಕೂ ಹೆಚ್ಚಿನ ಕ್ರೀಡಾಪಟುಗಳು ಭಾಗವಹಿಸಲಿದ್ದು, ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ಆನ್ಲೈನ್ನಲ್ಲಿ ನೊಂದಾಯಿಸಿಕೊಂಡಿರುವ ಎಲ್ಲಾ ಕ್ರೀಡಾಪಟುಗಳಿಗೆ ಗುಣಮಟ್ಟದ ಟ್ರಾಕ್ಸೂಟ್ ಮತ್ತು ಕ್ಯಾಪ್ ನೀಡಲಾಗುವುದು ಎಂದರು.

ರಾಜ್ಯ ಮಟ್ಟದ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ಹಾಗೂ ಟ್ರೋಫಿ ನೀಡಲಾಗುವುದು.  ಕ್ರೀಡಾಪಟುಗಳಿಗೆ ಮೂರು ದಿನಗಳ ಕಾಲ ರುಚಿ-ಶುಚಿಯಾದ ಊಟೋಪಚಾರ ವ್ಯವಸ್ಥೆ ಮಾಡಲಾಗಿದೆ. ರಾಜ್ಯಮಟ್ಟದಲ್ಲಿ ವಿಜೇತರಾದ  ಕ್ರೀಡಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುತ್ತಾರೆ.  ಈ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಸರ್ಕಾರಿ ನೌಕರರಿಗೆ ಒತ್ತಡದಿಂದ ಹೊರ ಬರಲು ಸಾಧ್ಯವಾಗುತ್ತದೆ ಎಂದರು.

ಮೇ 30 ರಂದು ಸಂಜೆ 4.30 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದು, ಇದೇ ಸಂದರ್ಭದಲ್ಲಿ ಕೆ.ಜಿ.ಐ.ಡಿ ಇಲಾಖೆಯ ಆನ್ಲೈನ್ ಸೇವೆ ಯೋಜನೆ ಹಾಗೂ ಎಸ್.ಎಂ.ಎಸ್ ಮೂಲಕ ನೌಕರರ ಮಾಸಿಕ ವೇತನ ಭತ್ಯೆಗಳ ಮಾಹಿತಿ ಯೋಜನೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದರು.

ಮೇ 30ರಂದು ಸಂಜೆ 7 ಗಂಟೆಗೆ ಖ್ಯಾತ ಗಾಯಕರಾದ ವಿಜಯ್ ಪ್ರಕಾಶ್ ಅವರಿಂದ ‘ಸಂಗೀತ ರಸ ಸಂಜೆ’  ಕಾರ್ಯಕ್ರಮ, 31 ರಂದು ಸಂಜೆ 7 ಗಂಟೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ 15 ಜಾನಪದ ಕಲಾ ತಂಡಗಳಿಂದ ‘ಜನಪದೋತ್ಸವ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಖಜಾಂಚಿ ಶ್ರೀನಿವಾಸ್, ಕಾರ್ಯಾಧ್ಯಕ್ಷರಾದ ಮಲ್ಲಿಕಾರ್ಜುನ ಭಂಡಾರಿ, ಹಿರಿಯ ಉಪಾಧ್ಯಕ್ಷರಾದ ಬಸವರಾಜು, ರುದ್ರಪ್ಪ, ಉಪಾಧ್ಯಕ್ಷರಾದ ಮಾಲತೇಶ್ ಉಪಸ್ಥಿತರಿದ್ದರು.

Sneha Gowda

Recent Posts

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

5 hours ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

6 hours ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

6 hours ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

6 hours ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…

7 hours ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

7 hours ago