ರಾಜ್ಯ ಸರ್ಕಾರ ಕೋವಿಡ್​ ಸಾವಿನ ಪ್ರಮಾಣ ಕಡಿಮೆ ಮಾಡುವಲ್ಲಿ ಯಶಸ್ವಿ: ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್

ಬೆಂಗಳೂರು: ರಾಜ್ಯ ಸರ್ಕಾರದ ಕ್ರಮಗಳಿಂದ ರಾಜ್ಯದಲ್ಲಿ ಕರೊನಾ ವೈರಸ್​ ಪ್ರಕರಣಗಳು ಸಂಪೂರ್ಣ ಕಡಿಮೆ ಆಗಿವೆ,ಕರೊನಾ ಪರಿಸ್ಥಿತಿಯಲ್ಲೂ ಸಾಕಷ್ಟು ಕೆಲಸಗಳು ಆಗಿವೆ ಎಂದು ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್​ ಅವರು ಸರ್ಕಾರದ ಕಾರ್ಯ ವೈಖರಿಯನ್ನು ಶ್ಲಾಘಿಸಿದರು.

ಸೋಮವಾರ (ಫೆ. 14) ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಮಾತನಾಡಿದರು.ಕನ್ನಡದಲ್ಲೇ ಭಾಷಣ ಆರಂಭಿಸಿದ ರಾಜ್ಯಪಾಲರು ಅಧಿವೇಶನಕ್ಕೆ ಹಾಜರಾದ ಎಲ್ಲರಿಗೂ ಸ್ವಾಗತ ಕೋರಿದರು.

ಕರೊನಾ ಪರಿಸ್ಥಿತಿ ಬಗ್ಗೆ ಮಾತನಾಡಿದ ರಾಜ್ಯಪಾಲರು ರಾಜ್ಯ ಸರ್ಕಾರವು ಯಶಸ್ವಿಯಾಗಿ ಕರೊನಾ ಪರಿಸ್ಥಿತಿಯನ್ನು ನಿರ್ವಹಣೆ ಮಾಡಿದೆ. ಎಲ್ಲರಿಗೂ ಕರೊನಾ ಲಸಿಕೆ ವಿತರಣೆ ಮಾಡಲಾಗಿದೆ ಎಂದು ಹೇಳಿದರು.

ರಾಜ್ಯ ಸರ್ಕಾರದ ಕ್ರಮಗಳಿಂದ ರಾಜ್ಯದಲ್ಲಿ ಕರೊನಾ ಕಡಿಮೆಯಾಗಿದೆ. ಸಾವಿನ ಪ್ರಮಾಣ ಕಡಿಮೆ ಮಾಡುವಲ್ಲಿಯೂ ಸರ್ಕಾರ ಯಶಸ್ವಿಯಾಗಿದೆ. ಇನ್ನೊಂದೆಡೆ ಕರೊನಾ ಲಸಿಕೆ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದೆ. ಶೇ. 100 ರಷ್ಟು ಮಂದಿ ಮೊದಲ ಡೋಸ್​ ಪಡೆದಿದ್ದಾರೆ. ಕರೊನಾ ಪಾಸಿಟಿವ್​ ರಿಪೋರ್ಟ್​ ಪಡೆದು ಬಂದ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿದೆ. ಹೋಮ್​ ಐಸೋಲೇಷನ್​ನಲ್ಲಿರುವವರಿಗೆ ವೈದ್ಯರ ಸಲಹೆ ಸೂಕ್ತವಾದ ಸಮಯದಲ್ಲಿ ದೊರೆಯುತ್ತಿದೆ ಎನ್ನುವ ಮೂಲಕ ರಾಜ್ಯ ಸರ್ಕಾರ ಕಾರ್ಯವೈಖರಿಯನ್ನು ಕೊಂಡಾಡಿದರು.

Swathi MG

Recent Posts

‘ಸೀತಾರಾಮ’ ಖ್ಯಾತಿಯ ವೈಷ್ಣವಿಗೆ ದಂಡ ವಿಧಿಸಿದ ರಿಯಲ್ ಪೊಲೀಸರು

ಯಾವಾಗಲೂ ಯಾರೇ ಆದರೂ ಟ್ರಾಫಿಕ್​ ರೂಲ್ಸ್​​ ಪಾಲನೆ ಮಾಡಲೇ ಬೇಕು. ಅದು ರಿಯಲ್ ಆಗಿರಲಿ ಅಥವಾ ರೀಲ್ ಆಗಿರಲಿ. ಹೌದು…

3 mins ago

ರಷ್ಯಾದಿಂದ ಕಡಿಮೆ ಬೆಲೆಗೆ ತೈಲ ಖರೀದಿಸಲು ಭಾರತಕ್ಕೆ ಅಮೆರಿಕ ಯಾಕೆ ಒಪ್ಪಿಗೆ ನೀಡಿದ್ದು?

ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿದ ಬಳಿಕ   ಅಮೆರಿಕ ಸೇರಿದಂತೆ ಹಲವು ಯೂರೋಪಿಯನ್ ದೇಶಗಳು ರಷ್ಯಾದ ಮೇಲೆ ಅನೇಕ ನಿರ್ಬಂಧಗಳನ್ನು…

10 mins ago

ಬೆಂಗಳೂರಿನಲ್ಲಿ ಭಾರಿ ಮಳೆ; ಆರ್​ಸಿಬಿ- ಡೆಲ್ಲಿ ಪಂದ್ಯ ರದ್ದು

ಐಪಿಎಲ್ 2024ರ 62 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಇಂದು ಸಂಜೆ…

26 mins ago

ದೇಶದ ಸಂಪೂರ್ಣ ಸಂಪತ್ತನ್ನು ಶ್ರೀಮಂತರಿಗೆ ಕೊಟ್ಟಿದ್ದಾರೆ ಮೋದಿ: ಪ್ರಿಯಾಂಕಾ ವಾಗ್ದಾಳಿ

ಇಲ್ಲಿನ ಕಾಂಗ್ರೆಸ್​ ಲೋಕಸಭಾ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿರುವ 'ಕೈ' ನಾಯಕ ರಾಹುಲ್ ಗಾಂಧಿ ಪರ ಪ್ರಚಾರ ಮಾಡಲು ಆಗಮಿಸಿದ ಅವರ…

51 mins ago

ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯವಾಗಿದೆ.  ಗುಟ್ಕಾ, ಎಲೆಅಡಿಕೆ, ತಂಬಾಕು ಅಗೆಯುವುದರಿಂದ, ಬೀಡಿ, ಸಿಗರೇಟ್ ಸೇದುವುದರಿಂದ ಹಲ್ಲುಗಳು ನೈಜ ಹೊಳಪು…

1 hour ago

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಸಾವು

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್​ ಸ್ಲಾಯ್​​ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್​​ನಲ್ಲಿ ಅವರು…

1 hour ago