ರಾಷ್ಟ್ರಧ್ವಜವನ್ನು ಕಾಂಗ್ರೆಸ್ ಪಕ್ಷ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ; ಸಿಎಂ ಬೊಮ್ಮಾಯಿ

ಬೆಂಗಳೂರು : ವಿಧಾನಸಭೆಯಲ್ಲಿ ರಾಷ್ಟ್ರಧ್ವಜ ಹಿಡಿದು ಕಾಂಗ್ರೆಸ್ ಪ್ರತಿಭಟನೆ ನಡೆಸಿದ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಷ್ಟ್ರಧ್ವಜವನ್ನು ಕಾಂಗ್ರೆಸ್ ಪಕ್ಷ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ. ಇಂದು ಕಾಂಗ್ರೆಸ್ ವಿರೋಧ ಪಕ್ಷವಾಗಿ ವಿಫಲವಾಗಿದೆ. ಇಂತಹ ವರ್ತನೆಗಳಿಂದ ಕಾಂಗ್ರೆಸ್ ದೇಶದಲ್ಲಿ ನೆಲಕಚ್ಚಿದೆ. ಕಾಂಗ್ರೆಸ್ ನವರು ರಾಜಕಾರಣಕ್ಕೆ ರಾಷ್ಟ್ರಧ್ವಜ ಬಳಸಿಕೊಂಡಿದ್ದು ಖಂಡನೀಯ ಎಂದು ಹೇಳಿದ್ದಾರೆ.

ಸಚಿವ ಕೆ.ಎಸ್. ಈಶ್ವರಪ್ಪ ಅವರು ಕೆಂಪು ಕೋಟೆಯ ಮೇಲೆ ಭಗವಾಧ್ವಜ ಒಂದಲ್ಲ ಒಂದು ದಿನ ಹಾರಾಡಬಹುದು ಎಂದು ಹೇಳಿಕೆ ನೀಡಿದ್ದರು. ಹೀಗಾಗಿ ಇಂದು ಕಾಂಗ್ರೆಸ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ ತಮ್ಮ ಕೈಗಳಲ್ಲಿ ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

Gayathri SG

Recent Posts

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

21 mins ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

40 mins ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

41 mins ago

ಜೀವ -ಜಲ ಉಳಿಸಲು ಸ್ವಯಂ ಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ: ಪ್ರಭಾಕರ ಶರ್ಮಾ

ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು  ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…

43 mins ago

ತಲೆ ಮೇಲೆ ಇಟ್ಟಿಗೆ ಎತ್ತಿ ಹಾಕಿ ಗೆಳೆಯನಿಂದಲೇ ಕೊಲೆ

ಮದ್ಯ ಸೇವನೆಗೆಂದು ಕರೆದೊಯ್ದು ಕೊಲೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

56 mins ago

ಏನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ: ಹೆಚ್.ಡಿ ದೇವೇಗೌಡ

ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ. ಆದ್ರೆ ನೆಲದ ಕಾನೂನು ವ್ಯಾಪ್ತಿಯಲ್ಲಿ ಏನೇನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ.…

1 hour ago