ಬೆಂಗಳೂರು: ಆ್ಯಂಬಿಡೆಂಟ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ಜನಾರ್ದನ ರೆಡ್ಡಿ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಒಂದನೇ ಎಸಿಎಂಎಂ ನ್ಯಾಯಾಲಯ ಬುಧವಾರಕ್ಕೆ ತೀರ್ಪನ್ನು ಕಾಯ್ದಿರಿಸಿದೆ. ನ್ಯಾಯಾಧೀಶ ಜಗದೀಶ್ ಅವರ ರೆಡ್ಡಿ ಪರ ವಕೀಲ ಹನುಮಂತರಾಯ ವಾದ ಮಂಡಿಸಿದರು.
ಆಂಬಿಡೆಂಟ್ ಪ್ರಕರಣದಲ್ಲಿ ಇಡಿಗೆ ಲಂಚ ಕೊಟ್ಟ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಆದಿತ್ಯವಾರ ಸಿಸಿಬಿ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ಈ ವೇಳೆ ನ್ಯಾಯಾಧೀಶರು ರೆಡ್ಡಿಗೆ ನ್ಯಾಯಾಂಗ ಬಂಧನ
ವಿಧಿಸಲಾಗಿತ್ತು.