News Karnataka Kannada
Thursday, May 02 2024
ಬೆಂಗಳೂರು ನಗರ

ರೇಡಿಯೋ ಜಾಕಿ ರಚನಾ ಹೃದಯಾಘಾತದಿಂದ ನಿಧನ

Rj Rachana
Photo Credit :

ಬೆಂಗಳೂರು : ರೇಡಿಯೋ ಜಾಕಿಯಾಗಿ, ಕೇಳುಗರನ್ನು ತಮ್ಮ ಮಾತಿನ ಮೂಲಕ ಸೆರೆಹಿಡಿದಿಟ್ಟಿದ್ದಂತ ರೇಡಿಯೋ ಜಾಕಿ ಆರ್.ಜೆ ರಚನಾ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ರೇಡಿಯೋ ಜಾಕಿಯಾಗಿ ಕೆಲಸ ಮಾಡುತ್ತಿದ್ದಂತ ಆರ್ ಜೆ ರಚನಾ (39), ಕಳೆದ 7 ವರ್ಷಗಳಿಂದ ಕೆಲಸ ಬಿಟ್ಟು ಮನೆಯಲ್ಲಿಯೇ ಏಕಾಂಗಿಯಾಗಿದ್ದರು.
ಹೀಗೆ ಒಬ್ಬಂಟಿಯಾಗಿದ್ದಂತ ಅವರು, ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎನ್ನಲಾಗಿದೆ. ಇದೇ ಹಿನ್ನಲೆಯಲ್ಲಿ ಇಂದು ಹೃದಯಾಘಾತಕ್ಕೆ ಒಳಗಾಗಿ, ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

ಅಂದಹಾಗೇ ರೇಡಿಯೋ ಜಾಕಿ ರಚನಾ ರೇಡಿಯೋ ಮಿರ್ಜಿಯಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ಪಟ್ ಪಟ್ ಮಾತಿನ ಮೂಲಕ ಅನೇಕ ಕೇಳುಗರನ್ನು ಸೆರೆಹಿಡಿದಿದ್ದರು. ಹೀಗೆ ಕೆಲಸ ಮಾಡಿ ಕೆಲಸ ಬಿಟ್ಟು ಮನೆಯಲ್ಲಿದ್ದಂತ ಅವರು ಡಿಪ್ರೆಷನ್ ಗೆ ಒಳಗಾಗಿದ್ದರು. ಇದೇ ಕಾರಣದಿಂದಾಗಿ ಮಾನಿಸಿಕ ಒತ್ತಡಕ್ಕೆ ಒಳಗಾದ ಕಾರಣ, ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು