News Karnataka Kannada
Friday, May 17 2024
ಬೆಂಗಳೂರು ನಗರ

ಲಾಕ್ ಡೌನ್ ವಿಸ್ತರಣೆ ಬಗ್ಗೆ ಸುಳಿವು ನೀಡಿದ ಯಡಿಯೂರಪ್ಪ

Photo Credit :

ಲಾಕ್ ಡೌನ್ ವಿಸ್ತರಣೆ ಬಗ್ಗೆ ಸುಳಿವು ನೀಡಿದ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 7ರ ಬಳಿಕ ಲಾಕ್‌ಡೌನ್ ವಿಸ್ತರಣೆ ಮಾಡಬೇಕೋ? ಬೇಡವೋ? ಎನ್ನುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಇನ್ನು ಈ ಬಗ್ಗೆ ಸ್ವತಃ ಸಿಎಂ ಬಿಎಸ್ ಯಡಿಯೂರಪ್ಪ ಅವರು ಪ್ರತಿಕ್ರಿಯಿಸಿದ್ದು, ಜೂನ್ 07ರ ಬಳಿಕವೂ ಲಾಕ್‌ಡೌನ್ ವಿಸ್ತರಣೆ ಮಾಡುವ ಬಗ್ಗೆ ಸುಳಿವು ಕೊಟ್ಟಿದ್ದಾರೆ.

ಇಂದು (ಬುಧವಾರ) ಸಂಜೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚೆ ಮಾಡುತ್ತೇವೆ. ಲಾಕ್​ಡೌನ್​ ವಿಸ್ತರಣೆ ಮಾಡಿ ಬಿಗಿ ಕ್ರಮಗಳ ಬಗ್ಗೆಯೂ ಚರ್ಚೆ ಮಾಡಲಾಗುತ್ತದೆ. ಅಧಿಕಾರಿಗಳ ಜೊತೆ ಚರ್ಚಿಸಿದ ಬಳಿಕ ಇದರ ಬಗ್ಗೆ ತೀರ್ಮಾನ ಮಾಡುತ್ತೇವೆ.ರಫ್ತು ಮಾಡುವ ಉದ್ಯಮಗಳಿಗೆ ಗುರುವಾರದಿಂದ ಅನುಮತಿ ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಕೊರೋನಾ ಇನ್ನೂ ಸಂಪೂರ್ಣವಾಗಿ ನಿಯಂತ್ರಣ ಆಗಿಲ್ಲ. ಅದನ್ನು ಸರಿದೂಗಿಸಿಕೊಂಡು ಹೇಗೆ ಹೋಗಬೇಕೆಂದು ಚರ್ಚೆ ಮಾಡಲಾಗುತ್ತದೆ. ಮತ್ತಷ್ಟು ವಲಯಗಳಿಗೆ ವಿನಾಯಿತಿ ನೀಡಿಕೆ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ.2ನೇ ಪ್ಯಾಕೇಜ್ ಇನ್ನೊಂದೆರಡು ದಿನಗಳಲ್ಲಿ ಘೋಷಣೆ ಮಾಡುತ್ತೇನೆ ಎಂದು ಹೇಳಿದರು.

ಹಳ್ಳಿಗಳಲ್ಲಿ ಈ ತಿಂಗಳಲ್ಲಿ ಹೆಚ್ಚು ಜನರಿಗೆ ಸೋಂಕು ಹರಡುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ. ಹೀಗಾಗಿ ಈಗಾಗಲೇ ಜಾರಿಯಲ್ಲಿರುವ ಲಾಕ್​ಡೌನ್​ ಮುಂದುವರಿಸಬೇಕಾ? ಬೇಡವಾ ಎಂದು ಸರ್ಕಾರ ನಿರ್ಧರಿಸಲಿದೆ. ಹಲವರು ಲಾಕ್​ಡೌನ್​ ಮುಂದುವರಿಸುವುದು ಸೂಕ್ತ ಎಂದರೆ, ಇನ್ನು ಕೆಲವರು ನಿಧಾನವಾಗಿ ಸಡಿಲಿಕೆ ಮಾಡುವುದು ಒಳಿತು ಎಂದು ಅಭಿಪ್ರಾಯಪಟ್ಟಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು