ವಕೀಲರ ವೇಷದಲ್ಲಿ ಕೋರ್ಟಿಗೆ ಬಂದು ಶರಣಾದ ಕೊಲೆ ಆರೋಪಿಗಳು

ಬೆಂಗಳೂರು: ಹಾಡುಹಗಲೇ ಬನಶಂಕರಿ‌ ದೇವಾಲಯ‌ದ ಮುಂದೆ ಫೈನಾನ್ಸಿಯರ್ ಮದನ್​ ಎಂಬುವರನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ 7 ಮಂದಿ ಆರೋಪಿಗಳು ವಕೀಲರ ವೇಷದಲ್ಲಿ ನ್ಯಾಯಾಲಯದ‌ ಮುಂದೆ ಶರಣಾದರು.ವಕೀಲರ ವೇಷದಲ್ಲಿ ಕೋರ್ಟಿಗೆ ಬಂದ ‘ಬನಶಂಕರಿ’ ಹಂತಕರುಬೆಳಗ್ಗೆ 37ನೇ ಎಸಿಎಂಎಂ ಕೋರ್ಟ್ ಆವರಣದಲ್ಲಿ ವಕೀಲರ ಸೋಗಿನಲ್ಲಿ ಏಳು ಮಂದಿ ಆರೋಪಿಗಳು ಪ್ರತ್ಯಕ್ಷರಾಗಿದ್ದಾರೆ.
ಜುಲೈ 2 ರಂದು ಬನಶಂಕರಿ ಮೆಟ್ರೋ ಸ್ಟೇಷನ್ ಬಳಿ ಫೈನಾನ್ಸಿಯರ್ ಆಗಿದ್ದ ಲಕ್ಕಸಂದ್ರ ನಿವಾಸಿ‌ ಮದನ್​ನನ್ನು ಹಿಂಬಾಲಿಸಿ ಮೂರು ಬೈಕ್​ನಲ್ಲಿ ಬಂದು ಆರೋಪಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು.‌ ಹತ್ಯೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಕಳೆದ ಎರಡು ವರ್ಷಗಳ ಹಿಂದೆ ಚನ್ನರಾಯಪಟ್ಟಣದ ರೌಡಿಶೀಟರ್​ ಲಿಂಗನ ಕೊಲೆಗೆ‌ ಮದನ್ ಫೈನಾನ್ಸ್ ಮಾಡಿದ್ದ ಎನ್ನಲಾಗುತ್ತಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾರೆ ಎಂಬ ಅಂಶ‌ ಪ್ರಾಥಮಿಕ ತನಿಖೆ ವೇಳೆ ತಿಳಿದುಬಂದಿದೆ. ಕೊಲೆ‌ ಮಾಡಿ ಪೊಲೀಸರಿಗೆ ಸುಳಿವು ಸಿಗದಂತೆ ತಲೆಮರೆಸಿಕೊಂಡಿದ್ದ ಆರೋಪಿಗಳು ಇಂದು ಬೆಳಗ್ಗೆ ಕೋರ್ಟ್ ಮುಂದೆ ವಕೀಲರ ವೇಷದಲ್ಲಿ ಪ್ರತ್ಯಕ್ಷರಾಗಿದ್ದಾರೆ. ಪೊಲೀಸರ ಗುಂಡೇಟಿನಿಂದ ತಪ್ಪಿಸಿಕೊಳ್ಳಲು‌ ಈ ಪ್ಲ್ಯಾನ್ ಮಾಡಿಕೊಂಡಿದ್ದರಾ? ಎಂಬ ಅನುಮಾನ ವ್ಯಕ್ತವಾಗಿದೆ. ಕೋವಿಡ್ ನಿಯಮ‌ ಪ್ರಕಾರ ಆರೋಪಿಗಳಿಗೆ ನ್ಯಾಯಾಲಯ ಪ್ರವೇಶ ನಿರಾಕರಣೆ ಹಿನ್ನೆಲೆಯಲ್ಲಿ‌ ಜಯನಗರ ಪೊಲೀಸರು ಸ್ಥಳದಲ್ಲೇ ಬಂಧಿಸಿ ಹೆಚ್ಚಿನ ವಿಚಾರಣೆಗೆ‌ ಒಳಪಡಿಸಿದ್ದಾರೆ.

 

Indresh KC

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

6 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

7 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

7 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago