ಬೆಂಗಳೂರು ನಗರ

ವರದಕ್ಷಿಣೆ ದಾಹ: ಪತ್ನಿಯನ್ನು ದುಪ್ಪಟ್ಟಾದಿಂದ ಕತ್ತು ಬಿಗಿದು ಕೊಂದ ಪತಿ

ಬೆಂಗಳೂರು : ವರದಕ್ಷಿಣೆ ಹಣ ತರುವಂತೆ ಪತ್ನಿಯನ್ನು ಹಿಂಸಿಸುತ್ತಿದ್ದ ಪತಿ ಮಹಾಶಯ ಇದೀಗ ಪತ್ನಿಯ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸುಂಕದಕಟ್ಟೆಯಲ್ಲಿ ನಡೆದಿದೆ.

ಸೌಮ್ಯ ಪತಿಯಿಂದ ಕೊಲೆಯಾದ ಮಹಿಳೆ. ಸೌಮ್ಯ ಹಾಗೂ ಯೋಗೀಶ್ ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದರು. ಯೋಗೀಶ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ. ಆದರೆ ಪತ್ನಿಗೆ ತವರು ಮನೆಯಿಂದ ಹಣ ತರುವಂತೆ ಪದೇ ಪದೇ ಹಿಂಸಿಸುತ್ತಿದ್ದ. ಪತಿಯ ಕಾಟ ತಾಳಲಾರದೇ ಸೌಮ್ಯ ಎರಡು ಬಾರಿ ಹಣ ತಂದು ಕೊಟ್ಟಿದ್ದಳಂತೆ.

ಇಷ್ಟಾದರೂ ವರದಕ್ಷಿಣೆ ದಾಹ ಕಡಿಮೆಯಾಗಿರಲಿಲ್ಲ. ಮತ್ತೆ ಮತ್ತೆ ಹಣಕ್ಕಾಗಿ ಪತ್ನಿಗೆ ಸತಾಯಿಸಿದ್ದಾನೆ. 2 ಲಕ್ಷ ಹಣ ತೆಗೆದುಕೊಂಡು ಬರುವಂತೆ ಹೇಳಿದ್ದಾನೆ. ಇದೇ ವಿಚಾರವಾಗಿ ಗಂಡ-ಹೆಂಡತಿ ನಡುವೆ ಜಗಳ ನಡೆದಿದೆ. ಪತ್ನಿ ಮೇಲೆ ಹಲ್ಲೆ ನಡೆಸಿದ ಯೋಗೇಶ್ ಆಕೆಯ ವೇಲ್ ನಿಂದಲೆ ಕತ್ತು ಬಿಗಿದು ಹತ್ಯೆಗೈದಿದ್ದಾನೆ.

Gayathri SG

Recent Posts

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

5 mins ago

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

17 mins ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

22 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

36 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

58 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

1 hour ago