ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಗೆ ಅಪಾರ ಪ್ರಮಾಣದಲ್ಲಿ ಹಾನಿ ಉಂಟಾಗಿದ್ದು, ಸಂತ್ರಸ್ತರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರಿಹಾರ ಘೋಷಿಸಿದ್ದಾರೆ.
ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಿಎಂ, ಮಳೆಯಿಂದ ಮನೆ ಸಂಪೂರ್ಣ ನೆಲಸಮವಾಗಿದ್ದರೆ 5 ಲಕ್ಷ ಪರಿಹಾರ ನೀಡಲಾಗುವುದು. ಮಳೆಯಿಂದ ಮನೆ ಭಾಗಶಃ ಬಿದಿದ್ರೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ಅಲ್ಪಪ್ರಮಾಣದಲ್ಲಿ ಹಾನಿಯಾದ ಮನೆಗಳಿಗೆ 50 ಸಾವಿರ ರೂಪಾಯಿ ಶೀಘ್ರವೇ ಪರಿಹಾರ ನೀಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.
ನೀರು ನುಗ್ಗಿ ಹಾನಿಯಾದ ಮನೆಗಳಿಗೆ 10,000 ರೂ., ಸಂಪೂರ್ಣ ಹಾನಿಯಾದ ಮನೆಗಳಿಗೆ 95,000 ರೂ. ಕೂಡಲೇ ಹಣ ಬಿಡುಗಡೆ ಮಾಡುವಂತೆ ಡಿಸಿಗೆ ಸೂಚಿಸಿದ್ದೇನೆ ಎಂದರು.
ಇನ್ನು ಪ್ರವಾಹ ಪೀಡಿತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಪರಿಹಾರ ಬಿಡುಗಡೆ ಆಗಿದ್ದು, ರಾಜ್ಯದ 16 ಜಿಲ್ಲೆಗಳಿಗೆ 352.99 ಕೋಟಿ ಹೆಚ್ಚುವರಿ ಪರಿಹಾರ ಬಿಡುಗಡೆ ಮಾಡಿದೆ.
ಜುಲೈ, ಆಗಸ್ಟ್ನಲ್ಲಿ ಅತಿವೃಷ್ಟಿಯಿಂದಾದ ಹಾನಿಗೆ ಸರ್ಕಾರ ಈ ಹೆಚ್ಚುವರಿ ಪರಿಹಾರ ಬಿಡುಗಡೆ ಮಾಡಿದ್ದು, ಹಾನಿಗೊಳಗಾದ ಸಂತ್ರಸ್ತರಿಗೆ ಸರ್ಕಾರದಿಂದ ಎನ್ಡಿಆರ್ಎಫ್, ಎಸ್ಡಿಆರ್ಎಫ್ ಅಡಿಯಲ್ಲಿ 352.99 ಕೋಟಿ ಹೆಚ್ಚುವರಿ ಪರಿಹಾರ ಬಿಡುಗಡೆ ಮಾಡಿದೆ.