ವರುಣ ಆರ್ಭಟಕ್ಕೆ ತತ್ತರಿಸಿದ ರಾಜ್ಯ: ಸರಕಾರದಿಂದ ಮಳೆ ಹಾನಿ ಪರಿಹಾರ ಘೋಷಣೆ

ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಗೆ ಅಪಾರ ಪ್ರಮಾಣದಲ್ಲಿ ಹಾನಿ ಉಂಟಾಗಿದ್ದು, ಸಂತ್ರಸ್ತರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರಿಹಾರ ಘೋಷಿಸಿದ್ದಾರೆ.

ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಿಎಂ, ಮಳೆಯಿಂದ ಮನೆ ಸಂಪೂರ್ಣ ನೆಲಸಮವಾಗಿದ್ದರೆ 5 ಲಕ್ಷ ಪರಿಹಾರ ನೀಡಲಾಗುವುದು. ಮಳೆಯಿಂದ ಮನೆ ಭಾಗಶಃ ಬಿದಿದ್ರೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ಅಲ್ಪಪ್ರಮಾಣದಲ್ಲಿ ಹಾನಿಯಾದ ಮನೆಗಳಿಗೆ 50 ಸಾವಿರ ರೂಪಾಯಿ ಶೀಘ್ರವೇ ಪರಿಹಾರ ನೀಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

ನೀರು ನುಗ್ಗಿ ಹಾನಿಯಾದ ಮನೆಗಳಿಗೆ 10,000 ರೂ., ಸಂಪೂರ್ಣ ಹಾನಿಯಾದ ಮನೆಗಳಿಗೆ 95,000 ರೂ. ಕೂಡಲೇ ಹಣ ಬಿಡುಗಡೆ ಮಾಡುವಂತೆ ಡಿಸಿಗೆ ಸೂಚಿಸಿದ್ದೇನೆ ಎಂದರು.

ಇನ್ನು ಪ್ರವಾಹ ಪೀಡಿತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಪರಿಹಾರ ಬಿಡುಗಡೆ ಆಗಿದ್ದು, ರಾಜ್ಯದ 16 ಜಿಲ್ಲೆಗಳಿಗೆ 352.99 ಕೋಟಿ ಹೆಚ್ಚುವರಿ ಪರಿಹಾರ ಬಿಡುಗಡೆ ಮಾಡಿದೆ.

ಜುಲೈ, ಆಗಸ್ಟ್‌ನಲ್ಲಿ ಅತಿವೃಷ್ಟಿಯಿಂದಾದ ಹಾನಿಗೆ ಸರ್ಕಾರ ಈ ಹೆಚ್ಚುವರಿ ಪರಿಹಾರ ಬಿಡುಗಡೆ ಮಾಡಿದ್ದು, ಹಾನಿಗೊಳಗಾದ ಸಂತ್ರಸ್ತರಿಗೆ ಸರ್ಕಾರದಿಂದ ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ಅಡಿಯಲ್ಲಿ 352.99 ಕೋಟಿ ಹೆಚ್ಚುವರಿ ಪರಿಹಾರ ಬಿಡುಗಡೆ ಮಾಡಿದೆ.

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

6 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

6 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

7 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

7 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago